ಸಂಪಾಜೆ: ಸಂಪಾಜೆ ಸಮೀಪದ ಜೇಡ್ಲ ಗ್ರಾಮದ ಗೋಪಾಲಕೃಷ್ಣ ದೇವಕಿ ಪಶು ಸಂಗೋಪನ ಕೇಂದ್ರದಲ್ಲಿ ಯುಗಾದಿ ಹಬ್ಬದ ಅಂಗವಾಗಿ ಮಾರ್ಚ್ 19, 2026ರಂದು ವಿವಿಧ ಧಾರ್ಮಿಕ ಹಾಗೂ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಬೆಳಿಗ್ಗೆ 2 ಗಂಟೆಗೆ ಕೃಷ್ಣ ಪೂಜೆ ಹಾಗೂ ಗೋ ಪೂಜೆ ನೆರವೇರಲಿದ್ದು, ಮಧ್ಯಾಹ್ನ 3 ಗಂಟೆಗೆ ಪ್ರಸಾದ ವಿತರಣೆ ಮತ್ತು ಗೋ ಪೂಜೆಯೊಂದಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಲಿದೆ.
ಈ ಸಂದರ್ಭದಲ್ಲಿ ಒಟ್ಟು 74 ಗೋ ದೇವತೆಗಳೊಂದಿಗೆ ವಿಶೇಷ ಪೂಜೆ ನಡೆಯಲಿದ್ದು, ಗೋ ಸೇವೆಗೆ ವಿಶೇಷ ಮಹತ್ವ ನೀಡಲಾಗಿದೆ.
ಕಾರ್ಯಕ್ರಮಕ್ಕೆ ಶ್ರೀಮತಿ ರಮಾದೇವಿ ಕಳಗಿ (ಪ್ರಭಾರ ಅಧ್ಯಕ್ಷರು, ಸಂಜೀವ ಗ್ರಾಮ ಪಂಚಾಯತ್) ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶ್ರೀ ಕೇಶವ್ ನಾರಾಯಣ ಮೂರ್ತಿ ಎನ್. ಎಸ್., ಶ್ರೀ ಸುಬ್ರಮಣ್ಯ ಡಿ. ಜಿ., ಶ್ರೀ ಸಂತೋಷ್ ಕುಮಾರ್, ಶ್ರೀ ರಮೇಶ್ ಹೊಳ್ಳ ಹಾಗೂ ಶ್ರೀ ಚಂದ್ರಕಾಂತ ಗೌಡ ಭಾಗವಹಿಸಲಿದ್ದಾರೆ.
ಯುಗಾದಿ ಹಬ್ಬದ ಅಂಗವಾಗಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಭಕ್ತರು ಹಾಗೂ ಗೋಪ್ರೇಮಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


