ಮಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಶ್ರೀನಿವಾಸ ವಿಶ್ವವಿದ್ಯಾಲಯದ ಶಿಕ್ಷಣ ಸಂಸ್ಥೆ (Institute of Education) ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದಲ್ಲಿ “Mindful Banking, Meaningful Living” ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಮಾರ್ಚ್ 7ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಆಯೋಜಿಸಲಾಯಿತು.
ಕಾರ್ಯಾಗಾರದಲ್ಲಿ ಮಹಿಳಾ ಸಬಲೀಕರಣ, ಒತ್ತಡ ನಿರ್ವಹಣೆ ಮತ್ತು ಸಮಗ್ರ ಆರೋಗ್ಯದ(Wellness) ಕುರಿತು ಅರಿವು ಮೂಡಿಸುವ ಉಪನ್ಯಾಸಗಳು ಹಾಗೂ ಸಂವಹನಾತ್ಮಕ ಚಟುವಟಿಕೆಗಳನ್ನು ನಡೆಸಲಾಯಿತು. ಬ್ಯಾಂಕ್ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿ ಉಪಯುಕ್ತ ಮಾಹಿತಿಗಳನ್ನು ಪಡೆದರು.
ಸಂಪನ್ಮೂಲ ವ್ಯಕ್ತಿಯಾಗಿ ಶ್ರೀನಿವಾಸ ವಿಶ್ವವಿದ್ಯಾಲಯದ ಶಿಕ್ಷಣ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕಿ ರೇವತಿ ಬಿ. ಆರ್. ಅವರು ಮಾರ್ಗದರ್ಶನ ನೀಡಿದರು. ಅವರಿಗೆ ಸಹಾಯಕ ಪ್ರಾಧ್ಯಾಪಕಿ ಅನಿತ ಸಿ. ಎಚ್. ಅವರು ಸಹಕಾರ ನೀಡಿದರು.ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಾದೇಶಿಕ ಬ್ಯಾಂಕ್ ವ್ಯವಸ್ಥಾಪಕರಾದ ವಿಕಾಸ್ ಸಿಂಗ್ ಅವರು ಕಾರ್ಯಕ್ರಮವನ್ನು ಮೆಚ್ಚಿ ಸಂಪನ್ಮೂಲ ವ್ಯಕ್ತಿಗೆ ಸ್ಮರಣಿಕೆ ನೀಡಿ ಗೌರವಿಸಿದರು.
ಶ್ರೀನಿವಾಸ ವಿಶ್ವವಿದ್ಯಾಲಯದ ಶಿಕ್ಷಣ ಸಂಸ್ಥೆಯ ಡೀನ್ ಡಾ. ಪದ್ಮನಾಭ ಸಿ. ಎಚ್. ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಗಾರ ಬ್ಯಾಂಕ್ ಸಿಬ್ಬಂದಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಯಶಸ್ವಿಯಾಗಿ ನೆರವೇರಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


