ಉಡುಪಿ: ಶ್ರೀಮನ್ಮಧ್ವಾಚಾರ್ಯ ಮೂಲಸಂಸ್ಥಾನ ಶ್ರೀ ಪುತ್ತಿಗೆ ಮಠ, ಉಡುಪಿ ವತಿಯಿಂದ ಶ್ರೀರಾಮೋತ್ಸವ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮವನ್ನು ಮಾರ್ಚ್ 26ರಂದು ಗುರುವಾರ ಸಂಜೆ 4 ಗಂಟೆಯಿಂದ ಉಡುಪಿಯ ಗೀತಾ ಮಂದಿರದಲ್ಲಿ ಆಯೋಜಿಸಲಾಗಿದೆ.
ಪರಮಪೂಜ್ಯ ಶ್ರೀಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಪಟ್ಟದ ಪರಮಪೂಜ್ಯ ಶ್ರೀಶ್ರೀ ಸುಪ್ರೀಂದ್ರತೀರ್ಥ ಶ್ರೀಪಾದರು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಭಕ್ತರಿಗೆ ಆಶೀರ್ವಚನ ನೀಡಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ವಿದ್ವಾನ್ ಶ್ರೀ ಕೆ.ವಿ. ರಮಣ ಆಚಾರ್ಯ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ವಿದ್ವಾನ್ ಶ್ರೀ ಸುಧೀಂದ್ರ ಆಚಾರ್ಯ ಅವರು ಧಾರ್ಮಿಕ ಪ್ರವಚನ ನೀಡಲಿದ್ದಾರೆ. ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಮತ್ತು ತಂಡವರಿಂದ ಸಮೂಹ ಗಾಯನ ಕಾರ್ಯಕ್ರಮವೂ ನಡೆಯಲಿದೆ.
ಬಳಿಕ ಮಹಾಪೂಜೆ ನೆರವೇರಿಸಿ, ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತದೆ.
ಶ್ರೀರಾಮೋತ್ಸವದ ಅಂಗವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಠದ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


