ಮಂಗಳೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗ (BBA) ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಕೈಗಾರಿಕಾ ಭೇಟಿಯನ್ನು ಆಯೋಜಿಸಿತು. ಎರಡು ವಿಭಿನ್ನ ಬ್ಯಾಚ್‌ಗಳಲ್ಲಿ ನಡೆಯಿತು.
ದ್ವಿತೀಯ ಬಿಬಿಎ ವಿದ್ಯಾರ್ಥಿಗಳು ಪಣಂಬೂರಿನ ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ (NMPA) ಗೆ ಭೇಟಿ ನೀಡಿ ಬಂದರಿನ ವಿವಿಧ ವಿಭಾಗಗಳ ಕಾರ್ಯವೈಖರಿ, ಕಾರ್ಗೋ ನಿರ್ವಹಣೆ, ರಫ್ತು-ಆಮದು ಪ್ರಕ್ರಿಯೆಗಳು ಹಾಗೂ ಲಾಜಿಸ್ಟಿಕ್ಸ್ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದರ ಮೂಲಕ ವಿದ್ಯಾರ್ಥಿಗಳಿಗೆ ಸಾಗಾಣಿಕೆ ಕಾರ್ಯಾಚರಣೆಗಳು ಮತ್ತು ಅಂತರಾಷ್ಟ್ರೀಯ ವ್ಯಾಪಾರದ ಪ್ರಾಯೋಗಿಕ ಅಂಶಗಳ ಕುರಿತು ತಿಳಿದುಕೊಳ್ಳುವ ಅವಕಾಶ ದೊರೆಯಿತು.
ಇದೇ ವೇಳೆ ಪ್ರಥಮ ಬಿಬಿಎ ಮತ್ತು ಬಿಬಿಎ ಅನಾಲಿಟಿಕ್ಸ್ ವಿದ್ಯಾರ್ಥಿಗಳು ಕುಲಶೇಖರದಲ್ಲಿರುವ ನಂದಿನಿ ಡೈರಿಗೆ ಭೇಟಿ ನೀಡಿದರು. ಅಲ್ಲಿ ಹಾಲಿನ ಸಂಗ್ರಹಣೆ, ಸಂಸ್ಕರಣೆ, ಗುಣಮಟ್ಟ ಪರಿಶೀಲನೆ, ಪ್ಯಾಕೇಜಿಂಗ್ ಮತ್ತು ವಿತರಣೆ ವ್ಯವಸ್ಥೆಗಳ ಕುರಿತು ಅಧಿಕಾರಿಗಳು ವಿವರಿಸಿದರು. ವಿದ್ಯಾರ್ಥಿಗಳು ಡೈರಿಯ ವಿವಿಧ ವಿಭಾಗಗಳನ್ನು ವೀಕ್ಷಿಸಿ ಉತ್ಪಾದನಾ ನಿರ್ವಹಣೆ ಮತ್ತು ತಂತ್ರಜ್ಞಾನ ಬಳಕೆಯ ಬಗ್ಗೆ ತಿಳಿದುಕೊಂಡರು.
ಈ ಕೈಗಾರಿಕಾ ಭೇಟಿ ವಿದ್ಯಾರ್ಥಿಗಳಿಗೆ ಸೈದ್ಧಾಂತಿಕ ಜ್ಞಾನವನ್ನು ಪ್ರಾಯೋಗಿಕ ಅನುಭವದೊಂದಿಗೆ ಸಂಪರ್ಕಿಸುವಲ್ಲಿ ಸಹಾಯಕವಾಗಿದ್ದು, ಎಲ್ಲರಿಗೂ ಉಪಯುಕ್ತ ಹಾಗೂ ಮಾಹಿತಿಪೂರ್ಣವಾಗಿತ್ತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


