ಸಂತ ಫಿಲೋಮಿನಾ ಕಾಲೇಜಿನಲ್ಲಿ ಕಲಾ ಉತ್ಸವ

Upayuktha
0

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಮಾನವಿಕ ಶಾಸ್ತ್ರ ವಿಭಾಗದ ವತಿಯಿಂದ ಮಾರ್ಚ್ 28ರಂದು ಎಸ್‌ಜೆಎಂ ಸಭಾಂಗಣದಲ್ಲಿ “ಕಲಾ ಕಾರ್ನಿವಲ್” ಎಂಬ ಅಂತರ್ವಿಭಾಗೀಯ ಕಲೋತ್ಸವವನ್ನು ಆಯೋಜಿಸಲಾಯಿತು.


ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ವಂ.ಡಾ. ಆಂಟನಿ ಪ್ರಕಾಶ್ ಮೊಂತೆರೋ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ವಿದ್ಯಾರ್ಥಿಗಳು ಪಾಠಭ್ಯಾಸದ ಜೊತೆಗೆ ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಗ್ರ ಅಭಿವೃದ್ಧಿಯನ್ನು ಸಾಧಿಸಬೇಕು ಎಂದು ಹೇಳಿದರು. ಇಂತಹ ಕಾರ್ಯಕ್ರಮವನ್ನು ಆಯೋಜಿಸಿದ ವಿಭಾಗವನ್ನು ಅವರು ಅಭಿನಂದಿಸಿದರು. ಉಪಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಎಂ ಹಾಗೂ ಮಾನವಿಕ ಶಾಸ್ತ್ರ ವಿಭಾಗದ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಧನ್ಯಾ ಮತ್ತು ತಂಡ ಪ್ರಾರ್ಥನೆ ಸಲ್ಲಿಸಿದರು. ಮಾನವಿಕ ಶಾಸ್ತ್ರ ವಿಭಾಗದ ಡೀನ್ ಹಾಗೂ ಅಕಾಡೆಮಿಕ್ ರಿಜಿಸ್ಟ್ರಾರ್ ಡಾ.ನಾರ್ಬರ್ಟ್ ಮಸ್ಕರೇನ್ಹಸ್ ಸ್ವಾಗತ ಭಾಷಣ ಮಾಡಿದರು. ಬಿಎ ವಿದ್ಯಾರ್ಥಿ ಸಿಮ್ಸರುಲ್ ಹಕ್ ವಂದನಾರ್ಪಣೆ ಸಲ್ಲಿಸಿದರು. ಸಬೀದಾ ಕಾರ್ಯಕ್ರಮ ನಿರ್ವಹಿಸಿದರು.


ಉದ್ಘಾಟನೆಯ ನಂತರ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ನಡೆಯಿತು. ಸಮಾರೋಪ ಸಮಾರಂಭದಲ್ಲಿ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೆರೋ ವಿಜೇತರಿಗೂ ಭಾಗವಹಿಸಿದ ವಿದ್ಯಾರ್ಥಿಗಳಿಗೂ ಅಭಿನಂದನೆ ಸಲ್ಲಿಸಿದರು. ಉಪಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಎಂ, ಮಾನವಿಕ ಶಾಸ್ತ್ರ ವಿಭಾಗದ ಡೀನ್ ಹಾಗೂ ಅಕಾಡೆಮಿಕ್ ರಿಜಿಸ್ಟ್ರಾರ್ ಡಾ. ನೋರ್ಬರ್ಟ್ ಮಸ್ಕರೆನ್ಹಾಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.


ಸಮಾರೋಪ ಕಾರ್ಯಕ್ರಮವು ವಿಷ್ಣುಪ್ರಿಯಾ ಅವರ ಪ್ರಾರ್ಥನಾ ನೃತ್ಯದಿಂದ ಪ್ರಾರಂಭವಾಯಿತು. ಸಂಜನಾ ಸ್ವಾಗತಿಸಿದರು. ರಿಯಾನಾ ವಂದನಾರ್ಪಣೆ ಸಲ್ಲಿಸಿದರು. ಸೃಷ್ಠಿ ಶೆಣೈ ಕಾರ್ಯಕ್ರಮ ನಿರ್ವಹಿಸಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top