ಸಂತ ಫಿಲೋಮಿನಾ ಕಾಲೇಜಿನಲ್ಲಿ “ಹೆಲ್ತಿ ವುಮನ್ ಇನಿಶಿಯೇಟಿವ್-ಅನೇಮಿಯಾ ಜಾಗೃತಿ ಮತ್ತು ತಪಾಸಣೆ”

Upayuktha
0


ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಹಾಗೂ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ “ಹೆಲ್ತಿ ವುಮನ್ ಇನಿಶಿಯೇಟಿವ್: ಅನೇಮಿಯಾ ಜಾಗೃತಿ ಮತ್ತು ತಪಾಸಣೆ” ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಅನೇಮಿಯಾ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ವಂ|ಡಾI ಆಂಟನಿ ಪ್ರಕಾಶ್ ಮೊಂತೆರೊ ದೈಹಿಕ ಹಾಗೂ ಮಾನಸಿಕ ಆರೋಗ್ಯ ಎರಡೂ ಮುಖ್ಯವೆಂದು ತಿಳಿಸಿ ವಿದ್ಯಾರ್ಥಿಗಳು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಮತ್ತು ಅಗತ್ಯವಿದ್ದಾಗ ವೈದ್ಯಕೀಯ ಸಲಹೆ ಪಡೆಯಬೇಕು ಎಂದು ಹೇಳಿದರು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜ್ವಾನ ತೇಜಸ್ವಿ ಸಿಕ್ವೇರಾ, ಜನರಲ್ ಸರ್ಜನ್ ಫಾ ಪತ್ರಾವೊ ಹಾಸ್ಪಿಟಲ್ ಪುತ್ತೂರು, ಇವರು ಅನೇಮಿಯಾ ಕುರಿತು ಸಮಗ್ರ ಮಾಹಿತಿ ನೀಡಿ, ಅನೇಮಿಯಾದ ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ವಿಧಾನಗಳನ್ನು ವಿವರಿಸಿ ಐರನ್ ಮತ್ತು ಪೋಷಕಾಂಶಗಳಿಂದ ಸಮೃದ್ಧವಾದ ಸಮತೋಲನ ಆಹಾರದ ಅಗತ್ಯತೆ ಹಾಗೂ ನಿಯಮಿತ ಆರೋಗ್ಯ ತಪಾಸಣೆ ಬಗ್ಗೆ ತಿಳಿಸಿದರು.


ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಡಾI ವಿಜಯಕುಮಾರ್ ಮೊಳೆಯಾರ್ , ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾIರಾಧಾಕೃಷ್ಣ ಗೌಡ , ಯೂತ್ ರೆಡ್ ಕ್ರಾಸ್ ಸಂಯೋಜಕಿ ಡಾI ಡಿಂಪಲ್ ಜೆನ್ನಿಫರ್ ಫರ್ನಾಂಡಿಸ್ ಹಾಗೂ ಆರೋಗ್ಯ ಕೇಂದ್ರ ಸಂಯೋಜಕಿ ಶ್ರೀಮತಿ ಶಶಿಪ್ರಭಾ ಉಪಸ್ಥಿತರಿದ್ದರು. ಮನೀಶ್ ಮತ್ತು ತಂಡ ಪ್ರಾರ್ಥಿಸಿ, ವಿಶ್ವ್ಮಿತ್ ವಿದೀಪ್ ಸ್ವಾಗತಿಸಿ,ಕೃಷ್ಣ ವಂಶಿ ವಂದಿಸಿ, ಶೇಖ್ ಮೊಹಮ್ಮದ್ ಫಹೀಮ್ ಕಾರ್ಯಕ್ರಮ ನಿರೂಪಿಸಿದರು.ಸುಮಾರು 300 ವಿದ್ಯಾರ್ಥಿಗಳು ಕಾರ್ಯಕ್ರಮದಿಂದ ಪ್ರಯೋಜನ ಪಡೆದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top