ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗ ಹಾಗೂ ಕಾಲೇಜಿನ ಐಐಸಿ ಘಟಕಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ಗಣಕವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ʼಎಐ ಇನ್ನೊವೇಶನ್ ಸ್ಪ್ರಿಂಟ್ - ಡಿಜಿಟಲ್ ಪರಿವರ್ತನೆಗಾಗಿ ತ್ವರಿತ ಪ್ರೊಟೊಟೈಪ್ ಅಭಿವೃದ್ಧಿʼ ಎಂಬ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೇರೊರವರು ವಿದ್ಯಾರ್ಥಿಗಳನ್ನುದ್ದೇಶಿಸಿ “ಕಾರ್ಯಕ್ರಮವನ್ನು ಆಯೋಜಿಸಿರುವುದು ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಜ್ಞಾನವನ್ನು ಹೆಚ್ಚಿಸಲು ಮಹತ್ವದ ಅವಕಾಶವಾಗಿದೆ ಎಂದು ಪ್ರಾಂಶುಪಾಲರು ಹೇಳಿದರು.ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಶಿಕ್ಷಣ, ಉದ್ಯಮ ಮತ್ತು ಸಮಾಜದ ಅಭಿವೃದ್ಧಿಗೆ ಮಹತ್ತರ .ವಿದ್ಯಾರ್ಥಿಗಳು ಹೊಸ ಆಲೋಚನೆಗಳನ್ನು ಅಭಿವೃದ್ಧಿಪಡಿಸಿ ವೇಗವಾಗಿ ಪ್ರೋಟೋಟೈಪ್‌ಗಳನ್ನು ಸೃಷ್ಟಿಸುವ ಮೂಲಕ ನವೀನತೆ ಬೆಳೆಸಬೇಕು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕತೆ, ಸಮಸ್ಯೆ ಪರಿಹಾರ ಸಾಮರ್ಥ್ಯ ಮತ್ತು ತಂತ್ರಜ್ಞಾನ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಸಹಾಯಕವಾಗುತ್ತದೆ” ಎಂದು ಹೇಳಿ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತ ಹಾಗೂ ಮಶೀನ್ ಲರ್ನಿಂಗ್ ವಿಷಯಗಳ ಕುರಿತು ತಮ್ಮ ಪ್ರಾಥಮಿಕ ಜ್ಞಾನವನ್ನು ಅಭಿವೃದ್ಧಿಪಡಿಸಿಕೊಳ್ಳಲು ಕರೆನೀಡಿದರು.
ಸಂಪನ್ಮೂಲವ್ಯಕ್ತಿಯಾಗಿ ಭಾಗವಹಿಸಿದ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ಮಂಗಳೂರಿನ ಎನಪೋಯ ಪರಿಗಣಿತ ವಿಶ್ವವಿದ್ಯಾನಿಲಯದ ಗಣಗವಿಜ್ಞಾನ ವಿಭಾಗದ ಹಿರಿಯ ಸಂಶೋಧನಾ ವಿದ್ಯಾರ್ಥಿನಿ ಅನುಶಾ ಎಂ ಡಿ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ವಿಷಯದ ಬಗ್ಗೆ ಮೂಲಭೂತ ಮಾಹಿತಿ ನೀಡಿ ಅವರು ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಹಾಗೂ ಹೊಸ ತಂತ್ರಜ್ಞಾನಗಳನ್ನು ಕಲಿಯಲು ಪ್ರೇರಣೆ ನೀಡಿದರು.
ಮಧುರಾ ಮತ್ತು ಬಳಗ ಪ್ರಾರ್ಥಿಸಿದರು. ಗಣಕವಿಜ್ಞಾನ ವಿಭಾಗದ ಡೀನ್ ಹಾಗೂ ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಡಾ| ವಿನಯಚಂದ್ರ ಸ್ವಾಗತಿಸಿ ಪ್ರಾಸ್ತವಿಕ ನುಡಿಗಳನ್ನಾಡಿದರು. ಗಣಕವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ವಾರಿಜಾ ಎಂ ವಂದಿಸಿದರು. ಗಣಕವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಖಲಂದರ್ ಶರೀಫ್ ಕಾರ್ಯಕ್ರಮ ನಿರೂಪಿಸಿದರು. ನಂತರ ಸಂಪನ್ಮೂಲ ವ್ಯಕ್ತಿ ಅನುಶಾ ಎಂಡಿಯವರು ತಾಂತ್ರಕ ಉಪನ್ಯಾಸ ನಡೆಸಿಕೊಟ್ಟರು ಹಾಗೂ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಸಿಎ ಎಐ & ಎಂಎಲ್ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


