ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ), ಪುತ್ತೂರಿನಲ್ಲಿ ಅಗ್ನಿಯಿಲ್ಲದೆ ಅಡುಗೆ ಸ್ಪರ್ಧೆ “ಮಾಸ್ಟರ್ ಮಿಕ್ಸ್ ಶೆಫ್ಸ್” ಆಯೋಜನೆ

Upayuktha
0


ಪುತ್ತೂರು: ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ), ಪುತ್ತೂರು ಇದರ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಮಂಗಳವಾರ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ “ಮಾಸ್ಟರ್ ಮಿಕ್ಸ್ ಶೆಫ್ಸ್” ಎಂಬ ಶೀರ್ಷಿಕೆಯಲ್ಲಿ ಅಗ್ನಿಯಿಲ್ಲದೆ ಅಡುಗೆ ಸ್ಪರ್ಧೆ ಆಯೋಜಿಸಲಾಯಿತು.


ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರಿಯೋ, ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಜೀವನ ಮೌಲ್ಯಗಳು ಮತ್ತು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು, ಆರೋಗ್ಯಕರ ಮತ್ತು ಪೌಷ್ಟಿಕ ಆಹಾರ ಸೇವನೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಅಗತ್ಯವೆಂದು ಅವರು ತಿಳಿಸಿದರು.



ವಿವಿಧ ಸ್ನಾತಕೋತ್ತರ ವಿಭಾಗಗಳಿಂದ ಒಟ್ಟು 11 ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿ, ತಮ್ಮ ಸೃಜನಶೀಲತೆ, ವಿನ್ಯಾಸ ಕೌಶಲ್ಯ ಹಾಗೂ ಪೌಷ್ಟಿಕ ಅರಿವು ಪ್ರದರ್ಶಿಸಿದರು.


ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರತಿಭಾ ಸ್ವಾಗತಿಸಿ, ಸ್ಪರ್ಧೆಯ ಉದ್ದೇಶವನ್ನು ವಿವರಿಸಿ ಧನ್ಯವಾದಗಳನ್ನು ಸಲ್ಲಿಸಿದರು. ವಿವಿಧ ಸ್ನಾತಕೋತ್ತರ ವಿಭಾಗಗಳ ಸಂಯೋಜಕರು, ಅಧ್ಯಾಪಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಈ ಕಾರ್ಯಕ್ರಮವನ್ನು ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಂಯೋಜಕರಾದ ಶ್ರೀಮತಿ ಶ್ರೀಮಣಿ ಯವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top