ಸಂತ ಫಿಲೋಮಿನಾ ಕಾಲೇಜು: ಫಾರ್ಮಾಸಿಟಿಕಲ್ ಕೆಮಿಸ್ಟ್ರಿ ಸರ್ಟಿಫಿಕೇಟ್ ಕೋರ್ಸ್‌ ಉದ್ಘಾಟನೆ

Upayuktha
0


ಪುತ್ತೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪದವಿ ಶಿಕ್ಷಣದ ಜೊತೆಗೆ ಪ್ರಾಯೋಗಿಕ ಜ್ಞಾನವನ್ನು ವಿದ್ಯಾರ್ಥಿಗಳು ಹೊಂದುವುದು ಅತ್ಯಂತ ಅಗತ್ಯವಾಗಿದೆ. ಫಾರ್ಮಾಸಿಟಿಕಲ್ ಕೆಮಿಸ್ಟ್ರಿ ಮುಂತಾದ ಸರ್ಟಿಫಿಕೇಟ್ ಕೋರ್ಸ್‌ಗಳು ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ಅನುಭವವನ್ನು ನೀಡುವುದರ ಮೂಲಕ ಉದ್ಯೋಗಾವಕಾಶಗಳನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಮೃತ್ ಕಿರಣ್ ರೈ ತಿಳಿಸಿದ್ದಾರೆ. ಅವರು ಸೌತ್ ಕೆನರಾ ಕೆಮಿಸ್ಟ್ಸ್ ಮತ್ತು ಡ್ರಗ್ಗಿಸ್ಟ್ ಸಂಘದ ಉಪಾಧ್ಯಕ್ಷರಾಗಿದ್ದು, ಮಂಗಳೂರಿನ ಪ್ರಗತಿ ಬಯೋಟೆಕ್ ಸಂಸ್ಥೆಯ ಮಾಲೀಕರಾಗಿದ್ದಾರೆ.


ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರಿನ ರಾಸಾಯನ ಶಾಸ್ತ್ರ ವಿಭಾಗವು ಶುಕ್ರವಾರ ಆಯೋಜಿಸಿದ್ದ ಫಾರ್ಮಾಸಿಟಿಕಲ್ ಕೆಮಿಸ್ಟ್ರಿ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಮಾತನಾಡಿದರು. ಇಂತಹ ಕೋರ್ಸ್‌ಗಳು ಪದವೀಧರರನ್ನು ನಿರುದ್ಯೋಗದಿಂದ ದೂರವಿಡುವಲ್ಲಿ ಸಹಕಾರಿ ಎಂದು ಅವರು ಅಭಿಪ್ರಾಯಪಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೋ ಅವರು ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಈ ರೀತಿಯ ಕೌಶಲ್ಯಾಧಾರಿತ ಕೋರ್ಸ್‌ಗಳು ಅನಿವಾರ್ಯ. ವಿದ್ಯಾರ್ಥಿಗಳು ಪಠ್ಯ ಜ್ಞಾನಕ್ಕೆ ಮಾತ್ರ ಸೀಮಿತವಾಗದೇ ಕೈಗಾರಿಕಾ ಜ್ಞಾನವನ್ನೂ ಹೊಂದಬೇಕು ಎಂದು ಹೇಳಿದರು. ಕೋರ್ಸ್‌ಗೆ ವಿದ್ಯಾರ್ಥಿಗಳು ತೋರಿದ ಆಸಕ್ತಿಯನ್ನು ಅವರು ಅಭಿನಂದಿಸಿದರು.


ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಮಾಲಿನಿ ಕೆ ಅವರು ಸ್ವಾಗತಿಸಿದರು. ರಚನಾ ಹಾಗೂ ಬಳಗದವರು ಪ್ರಾರ್ಥನೆ ಸಲ್ಲಿಸಿದರು. ಕೋರ್ಸ್ ಸಂಯೋಜಕರಾದ ಡಾ. ಎಡ್ವಿನ್ ಎಸ್. ಡಿ’ಸೋಜ ಅವರು ವಂದಿಸಿದರು. ವಿದ್ಯಾರ್ಥಿನಿ ನಿಫಾನ ಕಾರ್ಯಕ್ರಮವನ್ನು ನಿರೂಪಿಸಿದರು.


  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top