ಕರಾವಳಿ ಅಭಿವೃದ್ಧಿಗೆ ಒತ್ತು ನೀಡಿದ ರಾಜ್ಯ ಬಜೆಟ್: ಬಿ. ರಮಾನಾಥ ರೈ

Upayuktha
0


ಬೆಂಗಳೂರು: ಕರ್ನಾಟಕ ಸರ್ಕಾರ ಮಂಡಿಸಿದ ಇಂದಿನ ರಾಜ್ಯ ಬಜೆಟ್ ಜನಪರ ಹಾಗೂ ಅಭಿವೃದ್ಧಿ ಪರವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು ಮತ್ತು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಬಿ. ರಮಾನಾಥ ರೈ ಅಭಿಪ್ರಾಯಪಟ್ಟಿದ್ದಾರೆ.


ರೈತರು, ಮಹಿಳೆಯರು, ಯುವಕರು ಮತ್ತು ಮಧ್ಯಮ ವರ್ಗದ ಜನರಿಗೆ ಘೋಷಿಸಲಾದ ವಿವಿಧ ಯೋಜನೆಗಳು ಸ್ವಾಗತಾರ್ಹವಾಗಿವೆ. ರಾಜ್ಯದ ವಿವಿಧ ವರ್ಗಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಹಲವು ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡಿರುವುದು ಸಂತಸದ ಸಂಗತಿಯಾಗಿದೆ ಎಂದು ಅವರು ತಿಳಿಸಿದ್ದಾರೆ.


ವಿಶೇಷವಾಗಿ ಕರಾವಳಿ ಪ್ರದೇಶದ ಪ್ರವಾಸೋದ್ಯಮ, ಮೀನುಗಾರಿಕೆ ಹಾಗೂ ಪೊಲೀಸ್ ಠಾಣೆಗಳ ಬಲವರ್ಧನೆಗೆ ನೀಡಿರುವ ಪ್ರಾಮುಖ್ಯತೆ ಗಮನಾರ್ಹವಾಗಿದೆ. ಜೊತೆಗೆ ಕೃಷಿ, ಅರಣ್ಯ, ಆರೋಗ್ಯ, ಮುಜರಾಯಿ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ, ವಸತಿ ಹಾಗೂ ಶಿಕ್ಷಣ ಕ್ಷೇತ್ರಗಳಿಗೂ ಸಮರ್ಪಕ ಆದ್ಯತೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.


ಈ ಎಲ್ಲ ಕ್ರಮಗಳು ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದ್ದು, ವಿಶೇಷವಾಗಿ ಕರಾವಳಿ ಭಾಗದ ಅಭಿವೃದ್ಧಿಗೆ ಈ ಬಜೆಟ್ ಮಹತ್ವದ ಹೆಜ್ಜೆಯಾಗಲಿದೆ ಎಂದು ಬಿ. ರಮಾನಾಥ ರೈ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top