ಪ್ರಬಂಧ ಸ್ಪರ್ಧೆಯಲ್ಲಿ ಸುದಾನ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

Upayuktha
0


ಪುತ್ತೂರು: ಪುತ್ತೂರಿನ ಸುದಾನ ಶಾಲೆಯಲ್ಲಿ ಕರ್ನಾಟಕ ರಾಜ್ಯ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯು ಪುತ್ತೂರು ಸಮಿತಿಯ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿತ್ತು. “ ದೈನಂದಿನ ಜೀವನದಲ್ಲಿ  ಕೃತಜ್ಞತೆಯ ಪಾತ್ರ” ಎಂಬ ವಿಷಯದ ಬಗ್ಗೆ ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಶಾಲೆಯ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇವರಲ್ಲಿ ಕನ್ನಡ ಪ್ರಬಂಧ ರಚನೆಯಲ್ಲಿ ಅಭಿಜ್ಞಾ ಎ-ಪ್ರಥಮ , ಸ್ವೀಕೃತಿ-ದ್ವಿತೀಯ ಮತ್ತು ವಂಶಿ ತೃತೀಯ ಬಹುಮಾನ ಪಡೆದಿದ್ದಾರೆ.ಇಂಗ್ಲೀಷ್ ಪ್ರಬಂಧ ರಚನೆಯಲ್ಲಿ ತನ್ವಿ ಎಂ-ಪ್ರಥಮ, ಶಮಿತಾ ಎಂ -ದ್ವಿತೀಯ ಮತ್ತು ಪಲ್ಲವಿ -ತೃತೀಯ ಬಹುಮಾನವನ್ನು ಪಡೆದಿದ್ದಾರೆ. ವಿಜೇತರನ್ನು ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್, ಮುಖ್ಯ ಶಿಕ್ಷಕಿ ಶೋಭ ನಾಗರಾಜ್ ಅಭಿನಂದಿಸಿದ್ದಾರೆ. ಲಹರಿ ಸಾಹಿತ್ಯ ಸಂಘದ ಆಶ್ರಯದಲ್ಲಿ ಈ ಸ್ಪರ್ಧೆಯು ನಡೆಯಿತು.



  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top