ಹಾಸನ: ಬದಲಾದ ಶಿಕ್ಷಣ ವ್ಯವಸ್ಥೆಯಲ್ಲಿ ಎಲ್‌ಕೆಜಿ ಯಿಂದ ಹನ್ನೆರಡನೇ ತರಗತಿವರೆಗೆ ಒಂದೇ ಆವರಣದಲ್ಲಿ ವಿವಿಧ ವೃಂದದ ಶಿಕ್ಷಕರು ಕರ್ತವ್ಯ ನಿರ್ವಹಿಸಬೇಕಾಗಿರುತ್ತದೆ. ಎಲ್ಲರ ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ಬಗೆಹರಿಸಬೇಕಾದರೆ ಎಲ್ಲಾ ವೃಂದದ ಶಿಕ್ಷಕರು ಈ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಮೂಲಕ ಒಗ್ಗಟ್ಟಾಗಿ ಸಂಘಟಿತರಾಗಬೇಕೆಂದು ಈ ಸಂಘವನ್ನು ಸ್ಥಾಪಿಸಲಾಗಿದೆ ಎಂದು ರಾಜ್ಯಾಧ್ಯಕ್ಷರಾದ ಎಸ್ ಚೌಡಪ್ಪ ಅವರು ಹೇಳಿದರು.
ನಗರದ ಹರ್ಷಮಹಲ್ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಪದಗ್ರಹಣ ಮತ್ತು ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ ವಿದ್ಯಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ಹೊಳೆನರಸಿಪುರ ತಾಲೂಕಿನ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಪದಾಧಿಕಾರಗಳ ಪದಗ್ರಹಣ ನಡೆಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಪ್ಪೆಯ ಶಿಕ್ಷಕರಾದ ಮಂಜುನಾಥ ಬಿಕೆ ಇವರು ಅಧ್ಯಕ್ಷರಾಗಿ , ಬೇಡಿಗನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಎನ್.ಬಿ. ಪ್ರಸನ್ನ ಕುಮಾರ್ ಇವರು ಕಾರ್ಯದರ್ಶಿಯಾಗಿ, ಹರದನಹಳ್ಳಿ ಪ್ರೌಢಶಾಲೆಯ ಎನ್. ವಿಶ್ವನಾಥ್ ಇವರು ಖಜಾಂಚಿಯಾಗಿ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಪವಿತ್ರ ಪಿ.ಸಿ. ಇವರು ಜಿಲ್ಲಾ ಪರಿಷತ್ ಸದಸ್ಯರಾಗಿ, ಗೌರವಾಧ್ಯಕ್ಷರಾಗಿ ಸಂಗಪ್ಪ ರಕ್ಕಸಗಿ ಹಾಗೂ ಇವರ ಜೊತೆಗೆ ಹನ್ನೆರಡು ಪದಾಧಿಕಾರಿಗಳು ಪದಗ್ರಹಣ ಮಾಡಿದರು.
ಇದೇ ಸಂದರ್ಭದಲ್ಲಿ ಅತ್ಯುತ್ತಮವಾಗಿ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರುಗಳಾದ ತೆವಡಹಳ್ಳಿ ಶಾಲೆಯ ಶಿಕ್ಷಕಿ ಭವ್ಯ ಕೆ, ಶೆಟ್ಟರಕೊಪ್ಪಲು ಶಾಲೆಯ ಶಿಕ್ಷಕರಾದ ಶಂಕರಪ್ಪ, ಅಂಗ್ರಹಳ್ಳಿ ಪ್ರೌಢಶಾಲೆಯ ಶಿಕ್ಷಕಿ ಮಂಗಳ, ಸರ್ಕಾರಿ ಪದವಿ ಪೂರ್ವ ಕಾಲೇಜು ಹಳೆಕೋಟೆ ಉಪನ್ಯಾಸಕರಾದ ರಜನಿ ಎಚ್.ಎಮ್, ಅಕ್ಷರದ ದಾಸೋಹ ಕಚೇರಿಯ ಪ್ರಥಮ ದರ್ಜೆ ಸಹಾಯಕರಾದ ನಟೇಶ್ ಎಚ್. ಯು. ಇವರುಗಳಿಗೆ ವಿದ್ಯಾರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಜಿಲ್ಲಾಧ್ಯಕ್ಷರಾದ ಡಿ ರಮೇಶ್ ಮಾತನಾಡಿ ಶಿಕ್ಷಣ ಇಲಾಖೆಯಲ್ಲಿ ನಾವು ಎಲ್ಲರೂ ಒಂದೇ ಕುಟುಂಬದವರು ಪ್ರಾಥಮಿಕ ಪ್ರೌಢಶಾಲೆ ಕಾಲೇಜು ಎಂಬ ಭೇದಭಾವ ಇಲ್ಲದೆ ಕೆಪಿಎಸ್ ಮಾದರಿ ಎಲ್ಲಾ ವೃಂದಗಳನ್ನು ಒಂದೇ ಸಂಘಟನೆಯಡಿ ಒಗ್ಗೂಡಿಸುವ ಪ್ರಯತ್ನವನ್ನು ಮಾಡುತ್ತೇನೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಜಿ. ರಂಗನಾಥ ಸ್ವಾಮಿ, ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರವಿಪ್ರಕಾಶ್ ರಾಜ್ಯ ಉಪಾಧ್ಯಕ್ಷ ಎಸ್. ಎನ್. ಶಿವಕುಮಾರ್, ಶುಭ ಮಂಗಳ, ಹಾಸನ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ ರಂಗನಾಥ್, ಅರಕಲಗೂಡು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಪಿ. ನಾರಾಯಣ್ ಜಿಲ್ಲಾ ಕಾರ್ಯದರ್ಶಿಗಳಾದ ಎಂ.ಪಿ. ಶ್ರೀಕಾಂತ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


