ಔಷಧೀಯ ಕ್ಷೇತ್ರದಲ್ಲಿ ಅರ್ಥಶಾಸ್ತ್ರಜ್ಞರ ಪಾತ್ರ ಬಹಳ ಮುಖ್ಯ: ಡಾ ಗುರುರಾಜ್ ಭಟ್

Upayuktha
0


ಪುತ್ತೂರು: ಮನುಷ್ಯನಿಗೆ ಆರೋಗ್ಯ ತುಂಬಾ ಮುಖ್ಯ. ದೈಹಿಕ, ಮಾನಸಿಕ, ಸಾಮಾಜಿಕ ಮತ್ತು ಆಧ್ಯಾತ್ಮಿಕವಾಗಿ ಸುಸ್ಥಿರವಾಗಿರಲು ಆರೋಗ್ಯದ  ಕಾಳಜಿ ಪ್ರಮುಖ ಪಾತ್ರ ವಹಿಸುತ್ತದೆ. ಔಷಧಿಯ ಕ್ಷೇತ್ರಕ್ಕೆ ಇಂದು ಅರ್ಥಶಾಸ್ತ್ರಜ್ಞರ ಕೊಡುಗೆಯು ಅಗತ್ಯ. ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರ ಬೇಡಿಕೆ ಹೆಚ್ಚುತ್ತಲೇ ಇದೆ ಎಂದು ವಿವೇಕಾನಂದ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ ಗುರುರಾಜ್ ಭಟ್ ತಿಳಿಸಿದರು.  


ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇದರ ಅರ್ಥಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಫಾರ್ಮಕೋಎಕನಾಮಿಕ್ಸ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.


ದಿನೇ ದಿನೇ ಹೆಚ್ಚುತ್ತಿರುವ ರೋಗಿಗಳ ಸಂಖ್ಯೆಯ ನಿಟ್ಟಿನಲ್ಲಿ ಆರೋಗ್ಯದ ಕಾಳಜಿ ಮುಖ್ಯ. ಔಷಧೀಯ ಕ್ಷೇತ್ರ ಇಂದು ಇಡೀ ಪ್ರಪಂಚಕ್ಕೆ ಬೇಕಾದ ವೃತ್ತಿ. ಔಷಧಿ ತಯಾರಾಗುವಿಕೆಯ ಪ್ರಕ್ರಿಯೆಯಲ್ಲಿ ಆಧುನಿಕತೆ ಹೆಚ್ಚುತ್ತಿದೆ. ಫಾರ್ಮಸಿ ಕ್ಷೇತ್ರಕ್ಕೆ ಅರ್ಥಶಾಸ್ತ್ರಜ್ಞರ ಬೇಡಿಕೆಯು ಬಹಳ ಮಹತ್ತರ ಪಾತ್ರ ವಹಿಸುತ್ತದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹ ಉಪನ್ಯಾಸಕ ಗೋವಿಂದರಾಜ ಶರ್ಮ ಅಧ್ಯಕ್ಷೀಯ ನುಡಿಗಳನ್ನು ಆಡಿದರು.


ಕಾರ್ಯಕ್ರಮವನ್ನು ತೃತೀಯ ಬಿಎ ವಿದ್ಯಾರ್ಥಿನಿ  ಹರ್ಷಿತಾ ಸ್ವಾಗತಿಸಿ, ಕಾವ್ಯಶ್ರೀ ವಂದಿಸಿ, ದ್ವಿತೀಯ ಬಿಎ ವಿದ್ಯಾರ್ಥಿನಿ ಸೌಮ್ಯ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top