ಗ್ರಂಥಾಲಯ ವಿಭಾಗದಿಂದ ಪಠ್ಯ ಪುಸ್ತಕಗಳು ವಿತರಣೆ
ಹುನಗುಂದ: ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಪಾತ್ರ ಅಗಾಧವಾದುದು. ಆರೋಗ್ಯಕರ ಸಮಾಜ ನಿರ್ಮಾಣದ ಜೊತೆಗೆ ವ್ಯಕ್ತಿಯನ್ನು ಉತ್ತಮ ಮನುಷ್ಯನನ್ನಾಗಿ ಮಾಡುತ್ತವೆ ಎಂದು ಪ್ರಾಚಾರ್ಯ ಡಾ.ಎಸ್ ಆರ್ ಗೋಲಗೊಂಡ ಹೇಳಿದರು.
ಪಟ್ಟಣದ ವಿ.ಎಂ.ಕೆ.ಎಸ್.ಆರ್. ವಸ್ತ್ರದ ಕಲಾ, ವಿಜ್ಞಾನ ಹಾಗೂ ವಿ.ಎಸ್.ಬೆಳ್ಳಿಹಾಳ ವಾಣಿಜ್ಯ ಮಹಾವಿದ್ಯಾಲಯದ ಗ್ರಂಥಾಲಯ ವಿಭಾಗದಿಂದ ಮಹಾವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಠ್ಯಪುಸ್ತಕಗಳು ಒಂದು ವರ್ಗಕೋಣೆಯಲ್ಲಿ ರಾಷ್ಟ್ರದ ಭವಿಷ್ಯವನ್ನು ನಿರ್ಮಿಸುತ್ತವೆ. ಸತತವಾಗಿ ಓದುವುದರಿಂದ ಸಾಧನೆಯನ್ನು ಮಾಡಲು ಸಾಧ್ಯವಾಗುತ್ತದೆ. ಪಠ್ಯಪುಸ್ತಕಗಳ ಕೊಡುಗೆ ಅಪಾರವಾಗಿದೆ. ಸಾಹಿತ್ಯ ಓದು ವ್ಯಕ್ತಿಯನ್ನು ಮನುಷ್ಯನಾಗಿ ಮಾಡುತ್ತದೆ ಎಂದು ಹೇಳುವ ಮೂಲಕ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳ ಓದಿನಿಂದ ಪಡೆಯಬಹುದಾದ ಆತ್ಮಾನುಭವದ ಕುರಿತು ಮಾತನಾಡಿದರು.
ಗ್ರಂಥಪಾಲಕರಾದ ಎಮ್.ಎಸ್.ದರಗಾದ ಅವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಲೆಪ್ಟಿನೆಂಟ್ ಎಸ್ ಬಿ ಚಳಗೇರಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಎಸ್ ಆರ್ ನಾಗಣ್ಣವರ ಹಾಗೂ ಗಣಿತಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಅಮಲಿಕೊಪ್ಪ ಉಪಸ್ಥಿತರಿದ್ದರು. ಕು. ಅಕ್ಷತಾ ಪ್ರಾರ್ಥನೆ ಗೀತೆಯನ್ನು ಹಾಡಿದರು, ಡಾ ಪರಶುರಾಮ ಹಾದಿಮನಿ ಅವರು ಸ್ವಾಗತಸಿದರು. ಡಾ ಸಂತೋಷ ನಾಯಿಕ ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆ ಮಾಡಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


