ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ: ಚತುರ್ಥ ದಿನ
ಮಂಗಳೂರು: ನಮ್ಮ ಭಾರತೀಯ ಸನಾತನ ಸಂಸ್ಕೃತಿ ಉಳಿಯಬೇಕಾದರೆ ನಮ್ಮಲ್ಲಿ ಧಾರ್ಮಿಕ ಪ್ರಜ್ಞೆ ಮೂಡಬೇಕು. ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಆ ಕುರಿತಾದ ಚಿಂತನೆಗೆ ಅವಕಾಶ ಇಲ್ಲದಿರುವುದರಿಂದ, ಮಕ್ಕಳು, ಮಹಿಳೆಯರು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು. ಅದರಿಂದ ಜಾಗೃತಿ ಸಾಧ್ಯ ಎಂದು ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಧಾರ್ಮಿಕ ಮುಂದಾಳು ಹರಿಕೃಷ್ಣ ಪುನರೂರು ಅವರು ನುಡಿದರು.
ಅವರು ಯಕ್ಷ ಸ್ನೇಹ ಕಲಾಪ್ರತಿಷ್ಠಾನ (ರಿ) ಕೊಂಚಾಡಿ ಇವರು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ ಯಕ್ಷಮಂಜರಿಯ ಚತುರ್ಥ ದಿನದ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮಾಡಿ ಮಾತನಾಡಿದರು. ಉದ್ಯಮಿ ಮಹಾಬಲ ಕೊಟ್ಟಾರಿ ಅಧ್ಯಕ್ಷತೆ ವಹಿಸಿದ್ದರು.
ಯಕ್ಷಮಂಜರಿ ಅಷ್ಟಾಹ ಕಾರ್ಯಕ್ರಮದ ಯಶಸ್ಸಿಗಾಗಿ ಅವಿರತವಾಗಿ ಶ್ರಮಿಸುತ್ತಿರುವ ಯೋಗೀಶ ದೇವಾಡಿಗ ಇವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಶ್ರೀಮತಿ ಚಂಚಲ ತೇಜೋಮಯ, ಹರಿ ನಾರಾಯಣ ಬೈಪಾಡಿತ್ತಾಯ, ದೇವೇಂದ್ರ ಶೆಟ್ಟಿಗಾರ, ಶ್ರೀಮತಿ ಕಿರಣ ಮಹೇಶ ದೇವಾಡಿಗೆ, ಯಕ್ಷ ಸಿಂಧೂರ ಮಹಿಳಾ ಯಕ್ಷಗಾನ ಕೂಟ ತಲಪಾಡಿ ಇದರ ಸಂಚಾಲಕಿ ಶ್ರೀಮತಿ ರಾಧಾ ಹೊಳ್ಳ ಯಕ್ಷ ಸ್ನೇಹ ಕಲಾಪ್ರತಿಷ್ಠಾನದ ಗೌರವಾಧ್ಯಕ್ಷ ಮಧುಸೂದನ ಅಲೆವೂರಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಧ್ಯಕ್ಷೆ ಗೀತಾಲಕ್ಷ್ಮೀಶ, ಪ್ರತಿಷ್ಠಾನದ ಪದಾಧಿಕಾರಿಗಳಾದ ಮೋಹಿನಿ ಗೋಪಾಲ, ಅವನೀಶ ಭಟ್, ಶಿವಪ್ರಸಾದ್ ಕೊಕ್ಕಡ, ಹರೀಶ ಪಾಟಾಳಿ, ಅರುಣ್ ಕುಮಾರ್, ಗಣೇಶ ಬಿ.ಜಿ., ಯೋಗೀಶ ದೇವಾಡಿಗ, ಸೀಮಾ ಅರುಣ್, ಪ್ರಜ್ಞಾ ವಸಂತ, ಅನುರಾಧ ಯೋಗೀಶ, ಆದ್ಯಾ, ಲಕ್ಷ್ಯಾ, ಕೃತಿ, ಹೃತ್ವಿ, ಲಕ್ಷಾ, ವೃಷಭೇಂದ್ರ ಇವರೊಂದಿಗೆ ನೂರಾರು ಕಲಾಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಂತರ ಯಕ್ಷಸಿಂಧೂರ ಮಹಿಳಾ ಯಕ್ಷಗಾನ ಕೂಟ ತಲಪಾಡಿ ಇದರ ಮಹಿಳಾ ಕಲಾವಿದರಿಂದ ಭಕ್ತ ಸುಧನ್ವ ತಾಳಮದ್ದಳೆ ಕಾರ್ಯಕ್ರಮ ನಡೆಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

