ನೀರಾನೆ ದಾಳಿಗೆ ಬಲಿಯಾದ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿಗೆ ಶ್ರದ್ದಾಂಜಲಿ: ಸುರಕ್ಷಾ ಕ್ರಮಗಳಿಗೆ ಆಗ್ರಹ

Upayuktha
0


ಮಂಗಳೂರು: ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ನಿಸರ್ಗಧಾಮದಲ್ಲಿ ಚಿಕಿತ್ಸೆ ನೀಡುತ್ತಿದ್ದ ವೇಳೆ ನೀರಾನೆ ದಾಳಿಗೆ ತುತ್ತಾಗಿ ಮೃತಪಟ್ಟ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಅಕಾಲಿಕ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪಶುವೈದ್ಯಕೀಯ ಸಂಘದಿಂದ ಮಂಗಳವಾರ ಮಂಗಳೂರಿನಲ್ಲಿ ಇಂದು (ಮಾ.24) ಶ್ರದ್ದಾಂಜಲಿ ಸಲ್ಲಿಸಲಾಯಿತು.


ಸಂಘದ ಆವರಣದಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ಸದಸ್ಯರು ಒಂದು ನಿಮಿಷ ಮೌನಾಚರಣೆ ಆಚರಿಸಿ, ಮೃತರ ಆತ್ಮಕ್ಕೆ ಶಾಂತಿ ಕೋರಿದರು.


ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಡಾ. ಅರುಣ್ ಕುಮಾರ್ ಶೆಟ್ಟಿ ಎನ್ ಅವರು, ಅರಣ್ಯ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುವ ರಾಜ್ಯದ ಮೃಗಾಲಯಗಳಲ್ಲಿ ಸೇವೆ ಸಲ್ಲಿಸುವ ಪಶುವೈದ್ಯರಿಗೆ ಸಮರ್ಪಕ ಭದ್ರತಾ ಮುಂಜಾಗರೂಕತೆ ಕ್ರಮಗಳು ಹಾಗೂ ಅಗತ್ಯ ತಾಂತ್ರಿಕ ಸಿಬ್ಬಂದಿ ಸಹಾಯವನ್ನು ಒದಗಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ಚಿಕಿತ್ಸೆ ಸಂದರ್ಭಗಳಲ್ಲಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP)ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.


ಇದೇ ವೇಳೆ ಮೃತರ ಕುಟುಂಬಕ್ಕೆ ಗರಿಷ್ಠ ರೂ. 1 ಕೋಟಿ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಭಾ.ಆ.ಸೇ., ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.


ಸಭೆಯಲ್ಲಿ ಡಾ. ವಸಂತ್ ಕುಮಾರ್, ಡಾ. ಅಶೋಕ್ ಕೆ.ಆರ್., ಡಾ. ರೇಖಾ ಎಂ.ಟಿ., ಡಾ. ಧರಣೇಶ್, ಡಾ. ಕಮಲೇಶ್ ಸೇರಿದಂತೆ ಹಲವರು ಹಾಜರಿದ್ದರು.


ಮೃತರ ಸಾವಿಗೆ ವಿರೋಧ ವ್ಯಕ್ತಪಡಿಸುವ ಸಂಕೇತವಾಗಿ ಜಿಲ್ಲೆಯ ಎಲ್ಲಾ ಪಶುವೈದ್ಯರು ಮಂಗಳವಾರ ತೋಳಿಗೆ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top