ತುಮಕೂರು: ತೆರಕಣಾಂಬಿ ಯೋಜನೆ ಕಚೇರಿ ವ್ಯಾಪ್ತಿಯ ಕಬ್ಬಳಿ ವಲಯದ ಸಂಪಿಗೆಪುರದಲ್ಲಿ ಶುಕ್ರವಾರ (ಮಾ.13) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿ ಕಾಡಬಸಮ್ಮನವರಿಗೆ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಪ್ರಸಾದ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ವ್ಯಾಪ್ತಿಯ ಯೋಜನಾಧಿಕಾರಿ ಶ್ರೀಮತಿ ಮೂಕಾಂಬಿಕಾ , ತಾಲೂಕಿನ ಯೋಜನಾಧಿಕಾರಿಗಳಾದ ಶಶಿಕುಮಾರ್ ಹಾಗೂ ಯಜಮಾನರಾದ ಅಷ್ಟಾವರಣ ಮತ್ತು ಮಾದೇವಪ್ಪನವರು ಉಪಸ್ಥಿತರಿದ್ದರು. ಅವರ ಸಮ್ಮುಖದಲ್ಲಿ ಕಾಡಬಸಮ್ಮನವರಿಗೆ ವಾತ್ಸಲ್ಯ ಮನೆಯನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಯೋಜನಾಧಿಕಾರಿ ಶ್ರೀಮತಿ ಮೂಕಾಂಬಿಕ ಅವರು ಜ್ಞಾನವಿಕಾಸ ಕಾರ್ಯಕ್ರಮದಡಿ ಮಹಿಳೆಯರ ಸಬಲೀಕರಣದ ಮಹತ್ವದ ಕುರಿತು ಹಾಗೂ ವಾತ್ಸಲ್ಯ ಯೋಜನೆಯ ಉದ್ದೇಶಗಳ ಕುರಿತು ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು.
ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪ್ರಸಾದ್ ಅವರು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇವಲ ಸಾಲ ನೀಡುವ ಯೋಜನೆ ಮಾತ್ರವಲ್ಲ; ನಿರ್ಗತಿಕರು ಮತ್ತು ಬಡವರಿಗೆ ಆಶ್ರಯ ಹಾಗೂ ವಿವಿಧ ಸೌಲಭ್ಯಗಳನ್ನು ಒದಗಿಸುವ ಮಹತ್ವದ ಸೇವಾ ಕಾರ್ಯವನ್ನು ಮಾಡುತ್ತಿದೆ. ಪೂಜ್ಯ ಡಾ. ವೀರೇಂದ್ರ ಹೆಗ್ಡೆರು ಹಾಗೂ ಮಾತೃ ಹೇಮಾವತಿ ಅಮ್ಮನವರ ಆಶೀರ್ವಾದದಿಂದ ಇಂತಹ ಮನೆಗಳ ಮೂಲಕ ಅನೇಕ ಕುಟುಂಬಗಳು ನೆಮ್ಮದಿಯಿಂದ ಬದುಕಲು ಅವಕಾಶ ದೊರೆಯುತ್ತಿದೆ ಎಂದು ಹೇಳಿದರು.
ತಾಲೂಕಿನ ಯೋಜನಾಧಿಕಾರಿ ಶಶಿಕುಮಾರ್ ಅವರು ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಮನ್ವಯಾಧಿಕಾರಿಗಳು, ವಲಯ ಮೇಲ್ವಿಚಾರಕರಾದ ಯೋಗೀಶ್, ಸೇವಾ ಪ್ರತಿನಿಧಿಗಳಾದ ಗೌರಮ್ಮ, ನಾಗವೇಣಿ, ಸುಮಾ, ಸ್ವಸಹಾಯ ಸಂಘದ ಸದಸ್ಯರು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

