- ಶೈಕ್ಷಣಿಕ ಸಾಧನೆಗಾಗಿ ಒಂದು ಲಕ್ಷ ಮೊತ್ತದ ಸ್ಕಾಲರ್ಶಿಪ್
- ಕಾಲೇಜಿನ ಮೇಘಾ ಪೂಜಾರಿ ಮತ್ತು ಚಿನ್ಮಯಿ ವಿ ಆಯ್ಕೆ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಪ್ರತಿಷ್ಠಿತ Quest Global ಸಂಸ್ಥೆಯು ಕೊಡಮಾಡುವ ಒಂದು ಲಕ್ಷ ಮೌಲ್ಯದ ವಿದ್ಯಾರ್ಥಿ ವೇತನಕ್ಕೆ ಆಯ್ಕೆಗೊಂಡಿದ್ದಾರೆ.
ತೃತೀಯ ವರ್ಷದ ಇಸಿಇ (ECE) ವಿಭಾಗದ ಮೇಘಾ ಪೂಜಾರಿ ಮತ್ತು ದ್ವಿತೀಯ ವರ್ಷದ ಇಸಿಇ (ECE) ವಿಭಾಗದ ಚಿನ್ಮಯಿ ವಿ ತಮ್ಮ 2025-26 ನೇ ಸಾಲಿನ ಶೈಕ್ಷಣಿಕ ಸಾಧನೆ ಮತ್ತು ಎಂಜಿನಿಯರಿಂಗ್ ಕ್ಷೇತ್ರದಲ್ಲಿನ ಭರವಸೆಯ ಸಾಮರ್ಥ್ಯವನ್ನು ಗುರುತಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಮಾಡಲಾಗಿದೆ. ವಿದ್ಯಾರ್ಥಿಗಳು ತಲಾ 50,000 ದಂತೆ ವೇತನವನ್ನು ಪಡೆಯಲಿದ್ದಾರೆ.
ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮೆರೆದಿರುವ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್, ವಿಭಾಗದ ಮುಖ್ಯಸ್ಥರು, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ತಿಳಿಸಿ ಶುಭ ಹಾರೈಸಿರುತ್ತಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


