ನಾಳೆ ಐವರು ಸಾಧಕರಿಗೆ ಜಿಲ್ಲಾ ರೆಡ್‍ಕ್ರಾಸ್ ಗೌರವ

Upayuktha
0


ಉಡುಪಿ: ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಸಹಯೋಗದಲ್ಲಿ ಉಡುಪಿ ಜಿಲ್ಲಾ ಲೇಖಕಿಯರ ವಾಚಕಿಯರ ಸಂಘದ ಆಶ್ರಯದಲ್ಲಿ ಮಾರ್ಚ್ 14 ರಂದು ರೆಡ್‍ಕ್ರಾಸ್ ಭವನದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಮಹಿಳಾ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ರೆಡ್‍ಕ್ರಾಸ್ ಘಟಕವು ಉಡುಪಿ ಜಿಲ್ಲೆಯ ಐದು ಮಂದಿ ಸಾಧಕಿಯರನ್ನು ಗೌರವಿಸಲಿದೆ. 


ಸಾರ್ವಜನಿಕ ಆಡಳಿತ ಸೇವೆಗಾಗಿ ಶ್ಯಾಮಲಾ ಸಿ.ಕೆ, ಹಿರಿಯ ಲೇಖಕಿ ಮತ್ತು ಭಾóಷಾಂತರ ತಜ್ಞೆ  ಡಾ. ಪಾರ್ವತಿ ಜಿ. ಐತಾಳ್, ಕಲೆ ಮತ್ತು ಸಮಾಜಸೇವೆಗಾಗಿ ಕುಸುಮ ಕಾಮತ್ ಕರ್ವಾಲು, ಶೈಕ್ಷಣಿಕ ಸೇವೆಗಾಗಿ ಪ್ರೊ. ಸುಜಯ ಕೆ. ಎಸ್, ಹಿಂದಿ, ಸಾಹಿತ್ಯ, ಎನ್.ಎಸ್.ಎಸ್. ಎನ್.ಸಿ.ಸಿ ಮತ್ತು ರೆಡ್‍ಕ್ರಾಸ್ ಸೇವೆಗಾಗಿ ಕ್ಯಾಪ್ಟನ್ ಡಾ. ಸುಕನ್ಯ ಮಾರ್ಟಿಸ್ ಇವರನ್ನು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಚಲನಚಿತ್ರ ಮತ್ತು ರಂಗನಟಿ ಗೀತಾ ಸುರತ್ಕಲ್‍ರವರು ಸನ್ಮಾನಿಸಿ ಗೌರವಿಸಲಿದ್ದಾರೆ ಎಂದು ರೆಡ್ ಕ್ರಾಸ್ ಪ್ರಕಟಣೆ ತಿಳಿಸಿದೆ.



  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top