ಉಡುಪಿ: ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ ನಾಳೆ

Upayuktha
0


ಉಡುಪಿ, ಮಾ.16: ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ ಹಾಗೂ ವೃತ್ತಿ ಆಯ್ಕೆ ಕುರಿತು ಸಮಗ್ರ ಮಾಹಿತಿಯನ್ನು ಒದಗಿಸುವ ಉದ್ದೇಶದಿಂದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಉಡುಪಿ ವತಿಯಿಂದ ಜಿಲ್ಲಾ ಮಟ್ಟದ ವೃತ್ತಿ ದಿಕ್ಸೂಚಿ- “ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ”ವನ್ನು ಮಾರ್ಚ್ 17ರಂದು ಆಯೋಜಿಸಲಾಗಿದೆ.


ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರ ಕಚೇರಿ ನೀಡಿರುವ ಸುತ್ತೋಲೆ ಅನ್ವಯ ಡಯಟ್ ಉಡುಪಿಯಲ್ಲಿ ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕ (District Vocational and Career Guidance Cell) ಸ್ಥಾಪಿಸಲಾಗುತ್ತಿದ್ದು, ಇದರ ಅಂಗವಾಗಿ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ.


ಮೇಳವು ಉಡುಪಿ ನಗರದ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬೆಳಗ್ಗೆ 10:00ರಿಂದ ಸಂಜೆ 5:00ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ವಿವಿಧ ವೃತ್ತಿಪರ ಕೋರ್ಸ್‌ಗಳು, ಉನ್ನತ ಶಿಕ್ಷಣದ ಅವಕಾಶಗಳು ಹಾಗೂ ಉದ್ಯೋಗ ಕ್ಷೇತ್ರಗಳ ಕುರಿತು ಅರಿವು ಮೂಡಿಸುವುದು ಮೇಳದ ಮುಖ್ಯ ಉದ್ದೇಶವಾಗಿದೆ.


ಈ ಸಂದರ್ಭದಲ್ಲಿ 10ನೇ ಮತ್ತು 12ನೇ ತರಗತಿಯ ನಂತರದ ಶಿಕ್ಷಣ ಮಾರ್ಗಗಳು, ಜೊತೆಗೆ CET, NEET, JEE ಮುಂತಾದ ಪ್ರವೇಶ ಪರೀಕ್ಷೆಗಳ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಗುತ್ತದೆ. ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳು, ಬ್ಯಾಂಕ್‌ಗಳು ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಮಳಿಗೆಗಳನ್ನು ಸ್ಥಾಪಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಉನ್ನತ ಶಿಕ್ಷಣ ಮತ್ತು ವೃತ್ತಿ ಸಂಬಂಧಿತ ಮಾಹಿತಿಯನ್ನು ಒದಗಿಸಲಿವೆ.


ಮೇಳದಲ್ಲಿ ಆಸುಪಾಸಿನ ಹಲವಾರು ಸರಕಾರಿ ಮತ್ತು ಖಾಸಗಿ ವೃತ್ತಿಶಿಕ್ಷಣ ಕಾಲೇಜುಗಳು ಮತ್ತು ಸರಕಾರದ ವಿವಿಧ ಇಲಾಖೆಗಳು ಹಾಗೂ ಬ್ಯಾಂಕುಗಳು ಭಾಗವಹಿಸಲಿದ್ದು, ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯದ ಬಗ್ಗೆ ಸೂಕ್ತ ತಿಳುವಳಿಕೆ ಮತ್ತು ವಿವಿಧ ಇಲಾಖೆಗಳ ವಿದ್ಯಾರ್ಥಿವೇತನ, ಬ್ಯಾಂಕುಗಳಿಂದ ಲಭ್ಯವಾಗುವ ಶಿಕ್ಷಣ ಸಾಲ ಸೌಲಭ್ಯಗಳು ಇತ್ಯಾದಿಗಳ ಬಗ್ಗೆ ಸಂಪೂರ್ಣ ವಿವರ ಲಭ್ಯವಾಗುವುದಲ್ಲದೆ ಮಕ್ಕಳಿಗೆ ಈ ಕುರಿತ ತರಬೇತಿಗಳೂ ಲಭ್ಯವಾಗಲಿವೆ. 


9ರಿಂದ 12ನೇ ತರಗತಿ ವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು, ಅವರ ಪೋಷಕರು ಹಾಗೂ ಸಾರ್ವಜನಿಕರು ಮೇಳಕ್ಕೆ ಆಗಮಿಸಿ ಇದರ ಪ್ರಯೋಜನ ಪಡೆಯುವಂತೆ ಡಯಟ್ ಉಡುಪಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ಕೋರಿದ್ದಾರೆ.


ಹೆಚ್ಚಿನ ಮಾಹಿತಿಗಾಗಿ ಡಾ. ಕಿಶೋರ ಕುಮಾರ ಶೆಟ್ಟಿ (ಉಪನ್ಯಾಸಕರು, ಡಯಟ್) – 94492 58446 ಹಾಗೂ ಘಟಕದ ಸದಸ್ಯರಾದ ಶ್ರೀ ಮನೋಜ ಕಡಬ – 90084 18534 ಅವರನ್ನು ಸಂಪರ್ಕಿಸಬಹುದು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top