ಉಡುಪಿ: ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು ವತಿಯಿಂದ ಅಂತರ ಕಾಲೇಜು ಮಟ್ಟದ ವೈಭವಯುತ ಉತ್ಸವ “Beyond the Scroll – Rewriting the Social Narrative” ಮಾರ್ಚ್ 27ರಂದು (ಶುಕ್ರವಾರ) ಉಡುಪಿ ನಗರದ ಎಂ.ಜಿ.ಎಂ ಕಾಲೇಜು ಕ್ಯಾಂಪಸ್‌ನ ಟಿಎಂಪಿ ಪ್ಲಾಟಿನಂ ಜುಬಿಲಿ ಬ್ಲಾಕ್ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವು ಬೆಳಿಗ್ಗೆ 9.30ಕ್ಕೆ ಟ್ರೋಫಿ ಅನಾವರಣದೊಂದಿಗೆ ಆರಂಭವಾಗಲಿದ್ದು, 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಜಿ.ಎಂ ಕಾಲೇಜು ಟ್ರಸ್ಟ್ ಅಧ್ಯಕ್ಷ ಟಿ. ಸತೀಶ್ ಯು. ಪೈ ವಹಿಸಲಿದ್ದಾರೆ. ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಎಜಿಇ ಮಣಿಪಾಲದ ಆಡಳಿತಾಧಿಕಾರಿ ಡಾ. ಕೆ. ಶ್ರೀಧರ ಆರ್. ಪೈ ಭಾಗವಹಿಸಲಿದ್ದಾರೆ.
ಗೌರವ ಅತಿಥಿಗಳಾಗಿ ಎಂ.ಜಿ.ಎಂ ಕಾಲೇಜು ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ ಹಾಗೂ ಎಂ.ಜಿ.ಎಂ ಪಿಯು ಕಾಲೇಜು ಪ್ರಾಂಶುಪಾಲೆ ಶ್ರೀಮತಿ ಮಾಲತಿ ದೇವಿ ಉಪಸ್ಥಿತರಿರುವರು. ಬೆಳಿಗ್ಗೆ 10.30ರಿಂದ ವಿವಿಧ ಸ್ಪರ್ಧೆಗಳು ಹಾಗೂ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ.
ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಮೂಲದ ಆಟೋಮೊಬೈಲ್ ಆಸಕ್ತ ನಿರೀಕ್ಷಿತ್ ಹೆಬ್ರಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಜಿ.ಎಂ ಈವಿನಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ವಹಿಸಲಿದ್ದು, ಗೌರವ ಅತಿಥಿಗಳಾಗಿ ಡಾ. ಎಂ. ವಿಶ್ವನಾಥ ಪೈ ಹಾಗೂ ಡಾ. ಮಲ್ಲಿಕಾ ಎ. ಶೆಟ್ಟಿ ಭಾಗವಹಿಸಲಿದ್ದಾರೆ.
“Beyond the Scroll – Rewriting the Social Narrative” ಎಂಬ ಥೀಮ್‌ನೊಂದಿಗೆ ನಡೆಯುವ ಈ ಅಂತರ ಕಾಲೇಜು ಉತ್ಸವವು ವಿದ್ಯಾರ್ಥಿಗಳ ಸೃಜನಶೀಲತೆ, ಚಿಂತನೆ ಮತ್ತು ಸಾಮಾಜಿಕ ಅರಿವು ಬೆಳೆಸುವ ಉದ್ದೇಶ ಹೊಂದಿದ್ದು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


