ವಂದೇ ಮಾತರಂ ಗೀತೆ ಏಕತೆಯ ಪ್ರತೀಕ: ಕರ್ನಲ್ ಶರತ್ ಭಂಡಾರಿ

Upayuktha
0


ಮಂಗಳೂರು: ವಂದೇಮಾತರಂ ಗೀತ ರಚನೆಯಾಗಿ 150 ವರ್ಷ ಮತ್ತು ಬಲಿದಾನ ದಿನದ ಅಂಗವಾಗಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಂದೇಮಾತರಂ-150 ಕಾರ್ಯಕ್ರಮ ಆಯೋಜಿಸಲಾಗಿತ್ತು. ನಿವೃತ್ತ ಸೇನಾಧಿಕಾರಿ ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ನಿಟಕಪೂರ್ವ ಅಧ್ಯಕ್ಷ ನಿಟ್ಟೆಗುತ್ತು ಶರತ್ ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿದರು.


ಯುವ ಜನತೆ ದೇಶಕ್ಕಾಗಿ ಬಲಿದಾನ ಮಾಡಿದ ಹುತಾತ್ಮರನ್ನು ನೆನಪಿಸಿಕೊಳ್ಳಬೇಕು. ಅಲ್ಲದೇ, ಅವರತ್ಯಾಗ, ಬಲಿದಾನಗಳ ಕುರಿತು ಮಾಹಿತಿ ತಿಳಿದಿರಬೇಕು. ವಾಸ್ತವ ಯುದ್ಧಭೂಮಿಯಲ್ಲಿ ಹೋರಾಟ ಮಾಡಿದ ಸೈನಿಕರ ಮಾತುಗಳು ಯುವಜನರ ಮನಸ್ಸನ್ನು ಬೇಗನೇ ತಲುಪುತ್ತದೆ. ಸ್ವಾತಂತ್ರ್ಯ ಎಲ್ಲಕ್ಕಿಂತ ಮೀರಿದ ಅನುಭವ. ಅದಕ್ಕಾಗಿ ಅಪರಿಮಿತ ಸಂಖ್ಯೆಯ ಜನರು ತ್ಯಾಗ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿಗೌಡ, ಸ್ವಾತಂತ್ರ್ಯ ಪೂರ್ವದಲ್ಲಿ ರಾಷ್ಟ್ರದ ಏಕೀಕರಣಕ್ಕೆ ವಂದೇ ಮಾತರಂ ಗೀತೆಯ ಕೊಡುಗೆ ಬಹಳ ದೊಡ್ಡದಿದೆ. ಈ ಗೀತೆ ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಫೂರ್ತಿಯ ಚಿಲುಮೆಯಾಗಿತ್ತು. ಇಂದಿಗೂ ಈ ಗೀತೆ ಏಕತೆಯ ಪ್ರತೀಕವಾಗಿದೆ ಎಂದರು. 


ಇದೇ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಸಂಘದ ಉಪನಿರ್ದೇಶಕ ಪ್ರೊ. ಜಯವಂತ ನಾಯಕ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾರ್ತಿಕ್ ಸಿ. ಆಚಾರ್ಯ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೃಷ್ಣ ಆರ್. ವಾಲಿಕರ್, ಸಹಕಾರ್ಯದರ್ಶಿ ನಿಧಿ, ಲಲಿತ ಕಲಾ ಸಂಘದ ಕಾರ್ಯದರ್ಶಿ ಸುಪ್ರಿತಾ, ಉಪ ಕಾರ್ಯದರ್ಶಿ ಶಿವಾನಿ ಕೆ. ಸೇರಿದಂತೆ ವಿವಿಧ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top