ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಗ್ರಾಹಕ ವೇದಿಕೆ, ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ “The Informed Consumer: Rights and Safety in the 21st Century” ಎಂಬ ಶೀರ್ಷಿಕೆಯಡಿ ಗೂಗಲ್ ಮೀಟ್ ಮೂಲಕ ಒಂದು ವರ್ಚುವಲ್ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದ ಶ್ರೀಮತಿ ಅಶ್ನಿ ಗಿರಿಧರ್, ಡೆಕಾಥ್ಲಾನ್ ಗ್ಲೋಬಲ್ ಸಂಸ್ಥೆಯ ಬಿಸಿನೆಸ್ ಸ್ಟೀರಿಂಗ್ ಮತ್ತು ಅನಾಲಿಟಿಕ್ಸ್ ವಿಭಾಗದ ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಮತ್ತು ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿರುವ ಅವರು ಡಿಜಿಟಲ್ ಮಾರುಕಟ್ಟೆಗಳು ಗ್ರಾಹಕರಿಗೆ ಸುಲಭತೆಯನ್ನು ಒದಗಿಸಿದರೂ, ಗ್ರಾಹಕರು ಹೆಚ್ಚಿನ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಹೇಳಿದರು. ಅವರು ಗ್ರಾಹಕರ ಪ್ರಮುಖ ಹಕ್ಕುಗಳಾದ ಸುರಕ್ಷತೆ ಹಕ್ಕು, ಮಾಹಿತಿ ಹಕ್ಕು ಮತ್ತು ಪರಿಹಾರ ಪಡೆಯುವ ಹಕ್ಕುಗಳ ಬಗ್ಗೆ ವಿವರಿಸಿ,ಡಿಜಿಟಲ್ ಮಾರ್ಕೆಟಿಂಗ್ ತಂತ್ರಗಳು ಮತ್ತು ಇ- ಕಾಮರ್ಸ್ ವೇದಿಕೆಗಳಲ್ಲಿ ಕಾಣಿಸಿಕೊಳ್ಳುವ ‘ಡಾರ್ಕ್ ಪ್ಯಾಟರ್ನ್ಸ್’ಗಳು ಗ್ರಾಹಕರ ವರ್ತನೆಗೆ ಹೇಗೆ ಪ್ರಭಾವ ಬೀರುತ್ತವೆ ಎಂಬುದನ್ನೂ ವಿವರಿಸಿದರು. ವಿದ್ಯಾರ್ಥಿಗಳು ಜಾಣ್ಮೆಯ ಹಾಗೂ ಜವಾಬ್ದಾರಿಯುತ ಖರೀದಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದರು.
ಈ ಕಾರ್ಯಕ್ರಮವನ್ನು ಗ್ರಾಹಕ ವೇದಿಕೆಯ ಸಂಯೋಜಕರಾದ ಪ್ರವೀಣ್ ಡಿ ಮತ್ತು ಸ್ವಾತಿ ಶೆಟ್ಟಿ ಡಿ ಅವರು ಸಂಯೋಜಿಸಿದರು. ವಂದ್ಯಾ ಅವರು ಅತಿಥಿಗಳನ್ನು ಸ್ವಾಗತಿಸಿ, ಲಿಖಿತಾ ಅವರು ಅತಿಥಿಯನ್ನು ಸಭೆಗೆ ಪರಿಚಯಿಸಿ, ಅವನಿ ಧನ್ಯವಾದ ಸಲ್ಲಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


