ಮಹಿಳಾ ದಿನಾಚರಣಾ ಸಪ್ತಾಹ– 2026: ಉಡುಪಿಯಲ್ಲಿ ವಾರಪೂರ್ತಿ ಕಾರ್ಯಕ್ರಮಗಳು

Upayuktha
0


ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಾ. ಶಿವರಾಮ ಕಾರಂತ ಟ್ರಸ್ಟ್, ಉಡುಪಿ ಇವರ ವತಿಯಲ್ಲಿ, ಉಡುಪಿ ಜಿಲ್ಲಾ ಲೇಖಕಿಯರ-ವಾಚಕಿಯರ ಸಂಘ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಹಯೋಗದಲ್ಲಿ “ಅಂತರಾಷ್ಟ್ರೀಯ ಮಹಿಳಾ ದಿನಾಚರಣಾ ಸಪ್ತಾಹ – 2026” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ಮಹಿಳೆಯರ ಆರೋಗ್ಯ, ಶಿಕ್ಷಣ, ಸಾಮಾಜಿಕ ಜಾಗೃತಿ ಮತ್ತು ಸಬಲೀಕರಣ ಕುರಿತಾಗಿ ವಿವಿಧ ವಿಷಯಾಧಾರಿತ ಉಪನ್ಯಾಸಗಳು, ಸಂವಾದ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡ ಈ ಸಪ್ತಾಹವು ಮಾರ್ಚ್ 8ರಿಂದ ಮಾರ್ಚ್ 14, 2026ರವರೆಗೆ ನಡೆಯಲಿದೆ.


ಕಾರ್ಯಕ್ರಮದ ಅಂಗವಾಗಿ ವಿವಿಧ ದಿನಗಳಲ್ಲಿ ತಜ್ಞರು ಮತ್ತು ಗಣ್ಯರು ಭಾಗವಹಿಸಿ ಮಹಿಳೆಯರ ಆರೋಗ್ಯ ಸಂರಕ್ಷಣೆ, ಸಾಮಾಜಿಕ ಜಾಗೃತಿ, ಕಾನೂನು ಅರಿವು ಹಾಗೂ ಕುಟುಂಬ ಮತ್ತು ಸಮಾಜದಲ್ಲಿ ಮಹಿಳೆಯರ ಪಾತ್ರದ ಕುರಿತು ಉಪನ್ಯಾಸಗಳನ್ನು ನೀಡಲಿದ್ದಾರೆ.


ಮಾರ್ಚ್ 9ರಂದು ಮಧ್ಯಾಹ್ನ 2 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಗಣ್ಯರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಂತರ ಮಾರ್ಚ್ 10, 11, 12 ಮತ್ತು 13ರಂದು ವಿವಿಧ ವಿಷಯಾಧಾರಿತ ಉಪನ್ಯಾಸ ಹಾಗೂ ಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ.


ಕಾರ್ಯಕ್ರಮದ ಸಮಾರೋಪ ಸಮಾರಂಭವು ಮಾರ್ಚ್ 14ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸಮಾಜ ಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸುವ ಕಾರ್ಯಕ್ರಮವೂ ನಡೆಯಲಿದೆ.


ಮಹಿಳೆಯರ ಸಬಲೀಕರಣ ಹಾಗೂ ಸಾಮಾಜಿಕ ಜಾಗೃತಿಗೆ ಪೂರಕವಾಗಿರುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಮಹಿಳಾ ಸಂಘಟನೆಗಳ ಸದಸ್ಯರು ಹಾಗೂ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top