ಪುತ್ತೂರು: ಮಹಿಳಾ ದಿನವನ್ನು ಆಕೆಯ ಕರ್ತವ್ಯವನ್ನು ನೆನಪಿಸುವ ಸಲುವಾಗಿ ಆಚರಿಸಲಾಗುತ್ತದೆ. ಇದು ಒಂದೇ ದಿನಕ್ಕೆ ಸೀಮಿತವಾಗಿರಬಾರದು. ಆಗಾಗ ನೆನಪಿಸಿಕೊಳ್ಳಬೇಕಾದ ಶಕ್ತಿ ಹೆಣ್ಣಿನಲ್ಲಿದೆ. ಮಕ್ಕಳಿಗೆ ಸಂಸ್ಕಾರವನ್ನು ಕಲ್ಪಿಸುವುದರಲ್ಲಿ ಹೆಣ್ಣಿನ ಪಾತ್ರ ಮುಖ್ಯವಾಗಿದೆ. ಕೇವಲ ಮೀಸಲಾತಿ ನೀಡುವುದಲ್ಲದೆ ಆಕೆಯಲ್ಲಿ ಸುರಕ್ಷಿತ ಭಾವನೆ ಮೂಡುವಂತೆ ಮಾಡಬೇಕು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸದಸ್ಯೆ ಶುಭಾ ಅಡಿಗ ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಪುತ್ತೂರು ಇಲ್ಲಿನ ಮಹಿಳಾ ಸಂಘ ಮತ್ತು ಐಕ್ಯೂಎಸಿಯ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ- ದೃಷ್ಟಿಕೋನಗಳು ಮತ್ತು ಅಭ್ಯಾಸಗಳು ಎಂಬ ಕೌಶಲ್ಯವರ್ಧನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಕೃಷ್ಣ ಗಣರಾಜ ಭಟ್ "ಈ ದಿನ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿ ದಿನವು ಆಚರಿಸುವಂತಾಗಬೇಕು. ಮಕ್ಕಳನ್ನು ಪೋಷಿಸಿ, ಬೆಳೆಸುವಲ್ಲಿ ಮಹಿಳೆಯ ಪಾತ್ರ ಮುಖ್ಯವಾಗಿದೆ. ಇವರು ರಾಷ್ಟ್ರ ನಿರ್ಮಾಣದಲ್ಲಿ ಭಾಗವಹಿಸಿ ಭಾರತವನ್ನು ಉತ್ತುಂಗಕ್ಕೆರಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿನ ಪ್ರಾಂಶುಪಾಲ ಡಾ.ಯಶೋದ ರಾಮಚಂದ್ರ ಉಪಸ್ಥಿತರಿದ್ದರು.
ವಿಚಾರ ಸಂಕಿರಣದ ತೀರ್ಪುಗಾರರಾಗಿ ಡಾ.ಯಶೋಧ ರಾಮಚಂದ್ರ, ವ್ಯವಹಾರ ನಿರ್ವಹಣೆಯ ಮುಖ್ಯಸ್ಥೆ ರೇಖಾ ಪಿ, ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಲಕ್ಷ್ಮೀ ಭಟ್ ಸಹಕರಿಸಿದರು.
ಕಾರ್ಯಕ್ರಮವನ್ನು ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಸುಪ್ರಭಾ. ಎ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಹಂಪನಾ ವಂದಿಸಿದರು ಮತ್ತು ದ್ವಿತೀಯ ಬಿಎ ವಿದ್ಯಾರ್ಥಿ ಭೂಮಿಕಾ ಹಾಗೂ ಕೃತ್ತಿಕಾ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


