ಸುರತ್ಕಲ್: ಯುವ ಜನತೆ ಶಾಸ್ತ್ರೀಯ ಸಂಗೀತ ಮತ್ತು ನೃತ್ಯಗಳ ಕುರಿತು ವಿಶೇಷ ಆಸಕ್ತಿ ತೋರಿಸುತ್ತಿರುವುದು ಶ್ಲಾಘನೀಯ ಎಂದು ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್ ನುಡಿದರು.
ಅವರು ಮಣಿ ಕೃಷ್ಣಸ್ವಾಮಿ ಅಕಾಡೆಮಿ ಮತ್ತು ನಾಗರಿಕ ಸಲಹಾ ಸಮಿತಿ ಸುರತ್ಕಲ್ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಸುರತ್ಕಲ್‌ನ ಅನುಪಲ್ಲವಿಯ ಶ್ರೀ ವಿಶ್ವೇಶ ತೀರ್ಥ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಎನ್.ಐ.ಟಿ.ಕೆ.ಯ ವಿದ್ಯಾರ್ಥಿಗಳ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮದಲ್ಲಿ ಅಶಯ ನುಡಿಗಳನ್ನಾಡಿದರು.
ಎನ್.ಐ.ಟಿ.ಕೆ.ಯಲ್ಲಿ ನಡೆದ ಸ್ಪಿಕ್ ಮೆಕೆಯ ವಿರಾಸಾತ್ ಕಾರ್ಯಕ್ರಮವು ಆಸಕ್ತ ಸಹೃದಯರ ಒಳಗೊಳ್ಳುವಿಕೆಯೊಂದಿಗೆ ಯಶಸ್ವಿಯಾಗಿ ನಡೆದಿದೆ. ಶಾಸ್ತ್ರೀಯ ಸಂಗೀತ ಹಾಗೂ ನೃತ್ಯಗಳ ಕಮ್ಮಟಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಆಸಕ್ತಿಯಿಂದ ಕಲಿಕೆಯನ್ನು ಮುಂದುವರಿಸುತ್ತಿದ್ದಾರೆ. ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಕಲಾವಿದರು ಕಾರ್ಯಕ್ರಮಗಳಲ್ಲಿ ಸಕಾರಾತ್ಮಕವಾಗಿ ತೊಡಗಿಸಿಕೊಂಡು ಕಲೆಯ ಬೆಳವಣಿಗೆಯಲ್ಲಿ ಪಾಲುದಾರರಾಗಬೇಕು ಎಂದರು.
ಎನ್.ಐ.ಟಿ.ಕೆ.ಯ ವಿದ್ಯಾರ್ಥಿ ಕಲಾವಿದರಾದ ಶ್ರೀನಿವಾಸ ಎಸ್, ವಿಕ್ರಮ್. ಎಸ್., ಶ್ಯಾಮ ಪ್ರಮೋದ್.ಯು.ಎನ್ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ನಡೆಸಿ ಕೊಟ್ಟರು.ವಿಜೇತ ಸುಬ್ರಹ್ಮಣ್ಯ ವಯಲಿನ್ ನಲ್ಲಿ ಹಾಗೂ ಸಂದೀಪ್ ರಾಮಮೂರ್ತಿ ಮೃದಂಗದಲ್ಲಿ ಸಹಕರಿಸಿದರು.
ಮಂಗಳೂರಿನ ಗಾನ ನೃತ್ಯ ಅಕಾಡೆಮಿ ಯ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಅವರ ಶಿಷ್ಯೆ ಮಹತಿ ಹೆಚ್. ಪವನಸ್ಕರ್ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಿತು.
ಗಾನ ನೃತ್ಯ ಅಕಾಡೆಮಿಯ ನಿರ್ದೇಶಕಿ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ, ನಾಗರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ಕೆ. ರಾಜಮೋಹನ್ ರಾವ್, ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಅವರು ಶುಭ ಹಾರೈಸಿದರು. ಸಂಗೀತ ಕಲಾವಿದೆ ವಿದುಷಿ ಪ್ರಾರ್ಥನಾ ರಾವ್ ಚೆನ್ನೈ ಮತ್ತು ವಿಭು ರಾವ್ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

