ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌: ಉಜಿರೆಯ ಎಸ್.ಡಿ.ಎಂ ಮನ್ವಿತ್ ರೈಗೆ ಕಂಚಿನ ಪದಕ

Upayuktha
0

  • ಒಡಿಶಾ ಪ್ರತಿನಿಧಿಸಿದ ಕರ್ನಾಟಕದ ಕ್ರೀಡಾಪಟು
  • 26ನೇ ಪುರುಷರ ವಾಲಿಬಾಲ್ ಪಂದ್ಯಾಟ 





ಉಜಿರೆ: ಇತ್ತೀಚೆಗೆ ಓಡಿಶಾದ ಭುವನೇಶ್ವರದಲ್ಲಿ ಮಾರ್ಚ್ 15ರಿಂದ 20ರವರೆಗೆ ನಡೆದ ಪುರುಷರ ಮತ್ತು ಮಹಿಳೆಯರ 26ನೇ ಯುವ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಹಾಗೂ ಎಸ್‌ಡಿಎಂ ಕ್ರೀಡಾ ಸಂಘದ ತೃತೀಯ ವರ್ಷದ ಬಿಕಾಂ ವಿದ್ಯಾರ್ಥಿ ಮನ್ವಿತ್ ರೈ ಸಕ್ರಿಯವಾಗಿ ಭಾಗವಹಿಸಿ ಕಂಚಿನ ಪದಕ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.


ಕರ್ನಾಟಕ ರಾಜ್ಯದಿಂದ ಒಡಿಶಾ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕಾಸರಗೋಡಿನ ನೆಟ್ಟಣಿಗೆ ಮೂಲದ ಶ್ಯಾಮ್ ಪ್ರಸಾದ್ ರೈ ಮತ್ತು ಲಕ್ಷ್ಮೀ ದಂಪತಿಗಳ ಪುತ್ರ ಮನ್ವಿತ್ ರೈ, ಕಳೆದ ಬಾರಿ ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆದ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯಗಳ ಪುರುಷ ವಾಲಿಬಾಲ್ ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ್ದರು. ಈ ಹಿಂದೆ ಕೇರಳದಲ್ಲಿ ನಡೆದ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯಗಳ ಪುರುಷ ವಾಲಿಬಾಲ್ ಪಂದ್ಯಾವಳಿಯಲ್ಲೂ ಸಕ್ರಿಯವಾಗಿ ಭಾಗವಹಿಸಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ್ದರು.


ಇವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದಿನ್ ಪೂಜಾರಿ ತರಬೇತಿ ನೀಡಿರುತ್ತಾರೆ.


ರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆ ಮೆರೆದಿರುವ ವಿದ್ಯಾರ್ಥಿ ಮನ್ವಿತ್ ರೈ ಗೆ, ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ, ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಬಿ, ದೈಹಿಕ ಶಿಕ್ಷಣ ಉಪನ್ಯಾಸಕರಾದ ಶಾರದಾ, ಸುದೀನ್ ಪೂಜಾರಿ, ಸಂದೇಶ್ ಬಿ ಪೂಂಜ, ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top