ಜಾಜಿಕಟ್ಟೆ ಕೆರೆಯ ಹೂಳೆತ್ತುವ ಕಾಮಗಾರಿಗೆ ಭೂಮಿ ಪೂಜೆ; ಸಿರಾ ನಗರಕ್ಕೆ ಕುಡಿಯುವ ನೀರಿನ ಭರವಸೆ

Upayuktha
0


ಸಿರಾ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಸಿರಾ ನಗರದ ಹೃದಯ ಭಾಗದಲ್ಲಿರುವ ಜಾಜಿಕಟ್ಟೆ ಕೆರೆಯ ಹೂಳೆತ್ತುವ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಲಾಯಿತು. ಈ ಕಾಮಗಾರಿಯಿಂದ ಕೆರೆಯ ಪುನರುಜ್ಜೀವನವಾಗಿದ್ದು, ಶಿರಾ ನಗರಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಸುಧಾರಿಸಲು ಸಹಾಯಕವಾಗಲಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.


ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಜಯಚಂದ್ರ ಅವರು ಮಾತನಾಡಿ, ಪೂಜ್ಯರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಕೆರೆಗಳ ಪುನರುಜ್ಜೀವನ ಕಾರ್ಯವು ಪರಿಸರ ಸಂರಕ್ಷಣೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸುವ ದೃಷ್ಟಿಯಿಂದ ಮಹತ್ವದ್ದಾಗಿದೆ ಎಂದು ಹೇಳಿದರು. ಬರಡಾಗಿರುವ ಕೆರೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಭವಿಷ್ಯದಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದರು.


ಜಿಲ್ಲೆಯ ಗೌರವಾನ್ವಿತ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಅವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹಲವು ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಜಾಜಿಕಟ್ಟೆ ಕೆರೆಯ ಹೂಳೆತ್ತುವ ಕಾರ್ಯವು ಶಿರಾ ನಗರದ ಅಭಿವೃದ್ಧಿಗೆ ಪ್ರಮುಖ ಕೊಡುಗೆಯಾಗಲಿದೆ ಎಂದು ತಿಳಿಸಿದರು. ಶಿರಾ ನಗರದ ಜನರ ಪರವಾಗಿ ಪೂಜ್ಯರಿಗೆ ಕೃತಜ್ಞತೆಗಳನ್ನು ಸಲ್ಲಿಸಿ, ಅವರು ಮಾಡುತ್ತಿರುವ ಅನೇಕ ಸೇವಾ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಶಿರಾ ತಾಲೂಕಿನ ಯೋಜನಾಧಿಕಾರಿ ಸದಾಶಿವ ಗೌಡರು, ನಗರಸಭೆ ಅಧ್ಯಕ್ಷ ಜಿಶನ್ ಮಹಮ್ಮದ್, ಸುಡಾ ಅಧ್ಯಕ್ಷ ಮಂಜುನಾಥ್, ನಗರಸಭೆ ಕಮಿಷನರ್ ರುದ್ರೇಶ್, ಸುಡಾ ಕಮಿಷನರ್ ರಂಗಸ್ವಾಮಿ, ಕೆರೆ ಸಮಿತಿ ಅಧ್ಯಕ್ಷರಾದ ರಾಘವೇಂದ್ರ, ಉಪಾಧ್ಯಕ್ಷ ರಾಧಾಕೃಷ್ಣ, ವಾರ್ಡ್ ಸದಸ್ಯರಾದ ಉಮಾ ವಿಜಯರಾಜು ಸೇರಿದಂತೆ ಕೆರೆ ಸಮಿತಿ ಪದಾಧಿಕಾರಿಗಳು, ಪತ್ರಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 50 ಜನರು ಭಾಗವಹಿಸಿದ್ದರು.


ಕಾರ್ಯಕ್ರಮದ ಅಂಗವಾಗಿ ಜಾಜಿಕಟ್ಟೆ ಕೆರೆಯ ಹೂಳೆತ್ತುವ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.


ಇದೇ ವೇಳೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೈಲಹಳ್ಳಿ ಗ್ರಾಮದ ಕೃಷ್ಣಮ್ಮ ಅವರಿಗೆ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮವನ್ನು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ. ರಾಜಣ್ಣ ಅವರು ನೆರವೇರಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top