ರೋಶ್ನಿ ನಿಲಯದಲ್ಲಿ ಮಾರ್ಚ್ 17–18ರಂದು ಅಂತರಾಷ್ಟ್ರೀಯ ನ್ಯಾಯ ವಿಜ್ಞಾನ ಸಮಾವೇಶ

Upayuktha
0

‘CRIFO 2K26 – ಫೋರೆನ್ಸಿಕ್ ಫ್ಯೂಷನ್’ ಕಾರ್ಯಕ್ರಮದಲ್ಲಿ ತಜ್ಞರ ಉಪನ್ಯಾಸ, ವಿದ್ಯಾರ್ಥಿಗಳಿಗೆ ಸ್ಪರ್ಧೆಗಳು ಮತ್ತು ಸಂಶೋಧನಾ ಪ್ರಬಂಧ ಮಂಡನೆ




ಮಂಗಳೂರು: ಮಂಗಳೂರಿನ ರೋಶ್ನಿ ನಿಲಯ ಸ್ಕೂಲ್ ಆಫ್ ಸೋಶಿಯಲ್ ವರ್ಕ್‌ನ ಕ್ರಿಮಿನಾಲಜಿ ಮತ್ತು ನ್ಯಾಯ ವಿಜ್ಞಾನ ಸ್ನಾತಕೋತ್ತರ ವಿಭಾಗದ ವತಿಯಿಂದ ‘CRIFO 2K26 – ಫೋರೆನ್ಸಿಕ್ ಫ್ಯೂಷನ್’ ಎಂಬ ಎರಡು ದಿನಗಳ ಅಂತರಾಷ್ಟ್ರೀಯ ಸಮಾವೇಶವನ್ನು ಮಾರ್ಚ್ 17 ಮತ್ತು 18ರಂದು ಕಾಲೇಜಿನ ಮರಿಯಾ ಪೈವಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.


ಅಪರಾಧ ತನಿಖೆ ಹಾಗೂ ನ್ಯಾಯ ವಿಜ್ಞಾನ ಕ್ಷೇತ್ರದಲ್ಲಿ ನಡೆಯುತ್ತಿರುವ ನೂತನ ಸಂಶೋಧನೆಗಳು, ತಾಂತ್ರಿಕ ಅಭಿವೃದ್ಧಿಗಳು ಮತ್ತು ಆವಿಷ್ಕಾರಗಳ ಕುರಿತು ಚರ್ಚಿಸಲು ಈ ಸಮಾವೇಶವು ಜಾಗತಿಕ ವೇದಿಕೆಯಾಗಲಿದೆ. ದೇಶ-ವಿದೇಶಗಳಿಂದ ಆಗಮಿಸುವ ಖ್ಯಾತ ತಜ್ಞರು ವಿವಿಧ ವಿಷಯಗಳ ಕುರಿತು ವಿಶೇಷ ಗೋಷ್ಠಿಗಳು ಹಾಗೂ ಉಪನ್ಯಾಸಗಳನ್ನು ನಡೆಸಿಕೊಡಲಿದ್ದಾರೆ.


ಸಮಾವೇಶದಲ್ಲಿ ಸೈಬರ್ ಸೆಕ್ಯೂರಿಟಿ, ಡಿಜಿಟಲ್ ಫೋರೆನ್ಸಿಕ್ ಹಾಗೂ ಫೋರೆನ್ಸಿಕ್ ಟಾಕ್ಸಿಕಾಲಜಿ ಕುರಿತ ತಜ್ಞರ ಉಪನ್ಯಾಸಗಳು ನಡೆಯಲಿವೆ. ವಿದ್ಯಾರ್ಥಿಗಳಿಗಾಗಿ ನ್ಯಾಯ ವಿಜ್ಞಾನಕ್ಕೆ ಸಂಬಂಧಿಸಿದ ರಸಪ್ರಶ್ನೆ, ಥೀಮ್ಯಾಟಿಕ್ ರೀಲ್ ಮೇಕಿಂಗ್, ಸ್ಟ್ರೆಸ್ ಇಂಟರ್ವ್ಯೂ ಮತ್ತು ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಜೊತೆಗೆ ಸಂಶೋಧಕರು ಮತ್ತು ವಿದ್ಯಾರ್ಥಿಗಳು ವಿವಿಧ ತಾಂತ್ರಿಕ ವಿಷಯಗಳ ಕುರಿತು ತಮ್ಮ ಸಂಶೋಧನಾ ಪ್ರಬಂಧಗಳನ್ನು ಮಂಡಿಸುವ ಅವಕಾಶವೂ ಕಲ್ಪಿಸಲಾಗಿದೆ.


ಸಮಾವೇಶದಲ್ಲಿ ಭಾಗವಹಿಸಲು ಮಾರ್ಚ್ 13 ಕೊನೆಯ ದಿನಾಂಕವಾಗಿದ್ದು, ಭಾಗವಹಿಸುವ ಎಲ್ಲಾ ಪ್ರತಿನಿಧಿಗಳಿಗೆ ಪ್ರಮಾಣಪತ್ರ ನೀಡಲಾಗುತ್ತದೆ. ಕಾರ್ಯಕ್ರಮದ ದಿನಗಳಲ್ಲಿ ಊಟ ಮತ್ತು ಉಪಹಾರದ ವ್ಯವಸ್ಥೆಯೂ ಇರಲಿದೆ.


ಕಾಲೇಜಿನ ಪ್ರಾಂಶುಪಾಲರಾದ ಡಾ. ಸೋಫಿಯಾ ಎನ್. ಫೆರ್ನಾಂಡಿಸ್ ಅವರ ಮಾರ್ಗದರ್ಶನದಲ್ಲಿ ಹಾಗೂ ಸಂಯೋಜಕರಾದ ಡಾ. ಸರಿತಾ ಡಿಸೋಜ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ 9743633882 ಅಥವಾ 8217294693 ಅನ್ನು ಸಂಪರ್ಕಿಸಬಹುದು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top