ಮಂಗಳೂರು ವಿವಿ 2024–25 ಪದವಿ ಪರೀಕ್ಷೆ: ಎಸ್‌.ಸಿ‌.ಎಸ್‌ ಪ್ರಥಮ ದರ್ಜೆ ಕಾಲೇಜಿಗೆ 2 ಪ್ರಥಮ ರ್‍ಯಾಂಕ್

Upayuktha
0




ಮಂಗಳೂರು: ಮಂಗಳೂರಿನ ಎಸ್‌.ಸಿ‌.ಎಸ್‌ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರಾದ ವೃಂದಾ ಜಿ. ರಾವ್ ಹಾಗೂ ಪೂರ್ಣಾ ಸಿ. ಅವರು ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2024–25ನೇ ಸಾಲಿನ ಪದವಿ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.


ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ವೃಂದಾ ಜಿ. ರಾವ್ ಅವರು ತಮ್ಮ ವಿಭಾಗದಲ್ಲಿ ಪ್ರಥಮ ರ್‍ಯಾಂಕ್ ಗಳಿಸಿದ್ದು, ಬಿ.ಎಸ್ಸಿ ಅನಿಮೇಶನ್ ಮತ್ತು ದೃಶ್ಯ ಪರಿಣಾಮಗಳು ವಿಭಾಗದ ವಿದ್ಯಾರ್ಥಿನಿ ಪೂರ್ಣಾ ಸಿ. ಅವರು ಸಹ ಪ್ರಥಮ ರ್‍ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.


ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿ ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಸಾಧನೆಗಳನ್ನಾಗಲಿ ಎಂದು ಶುಭ ಹಾರೈಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top