ಎಸ್‌ಡಿಎಂ ಕಾಲೇಜು ಸಸ್ಯಶಾಸ್ತ್ರ ವಿಭಾಗದಿಂದ ಕಾಂಚನ ಪ್ರೌಢಶಾಲೆಯಲ್ಲಿ Lab In Cab ಕಾರ್ಯಕ್ರಮ

Upayuktha
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆ, ಕಾಂಚನದಲ್ಲಿ Lab In Cab ಕಾರ್ಯಕ್ರಮವನ್ನು 02 ಮಾರ್ಚ್ 2026 ರಂದು ಹಮ್ಮಿಕೊಳ್ಳಲಾಯಿತು. ಶಾಲೆಯ 8 ಹಾಗೂ 9 ನೇ ತರಗತಿಯಲ್ಲಿ ಕಲಿಯುತ್ತಿರುವ 8೦ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.


ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಏಕದಳ ಹಾಗೂ ದ್ವಿದಳ ಸಸ್ಯಗಳ ಕಾಂಡದ ಒಳ ವಿನ್ಯಾಸ ಹಾಗೂ ಸಸ್ಯ ಬಾಷ್ಪೀಕರಣವನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ಪ್ರದರ್ಶಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ರಮೇಶ್ ಮಯ್ಯ ಹಾಗೂ ಅವರ ಶಿಕ್ಷಕ ವೃಂದ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರವಿತ್ತರು.


ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಭಿಲಾಷ್ ಕೆ.ಎಸ್. ಕಾರ್ಯಕ್ರಮವನ್ನು ಆಯೋಜಿಸಿದರು. ಸಸ್ಯಶಾಸ್ತ್ರ ವಿಭಾಗದ ಸಹಾಯಕರಾದ ಸುಂದರ, ವಿದ್ಯಾರ್ಥಿಗಳಾದ ಮೇಘಾ, ಜ್ಯೋತಿಕಾ ಹಾಗೂ ಸಿಂಚನಾ ಸಹಕರಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top