ಕೊಂಚಾಡಿ: ಯಕ್ಷ ಸ್ನೇಹ ಕಲಾಪ್ರತಿಷ್ಠಾನ (ರಿ.), ಕೊಂಚಾಡಿ ಇವರಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ ಮಹಿಳಾ ಯಕ್ಷಗಾನ ತಾಳಮದ್ದಲೆ ಅಷ್ಟಾಹ ಸಂಭ್ರಮ ‘ಯಕ್ಷಮಂಜರಿ’ಯ ದ್ವಿತೀಯ ದಿನದ ಕಾರ್ಯಕ್ರಮವು ಭಕ್ತಿಭಾವ ಮತ್ತು ಸಾಂಸ್ಕೃತಿಕ ವೈಭವದೊಂದಿಗೆ ನೆರವೇರಿತು.
ಕಾರ್ಯಕ್ರಮವನ್ನು ವಿದ್ವಾನ್ ಶ್ರೀ ಅರವಿಂದ ಭಟ್- ಶ್ರೀ ದುರ್ಗಾಪರಮೇಶ್ವರೀ ನಾಗಕನ್ನಿಕ ದೇವಸ್ಥಾನದ ಪ್ರಧಾನ ಅರ್ಚಕರು- ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಮಾತನಾಡಿದರು. ದೇವಸ್ಥಾನಗಳು ಕೇವಲ ಪೂಜಾ ಕೇಂದ್ರಗಳಾಗದೆ, ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಬೆಳೆಸುವ ಕೇಂದ್ರಗಳಾಗಬೇಕು. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಿ ಆಯೋಜಿತವಾಗಲಿ; ದೇವರ ಅನುಗ್ರಹ ಸರ್ವರಿಗೂ ಲಭಿಸಲಿ ಎಂದು ಅವರು ಆಶಯ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಶ್ರೀ ಲಕ್ಷ್ಮಣ ದೇವಾಡಿಗ — ಮಂದಾರಬಯಲು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೋಕ್ತೇಸರರು, ಖ್ಯಾತ ನಿರೂಪಕಿ ಹಾಗೂ ವಾಗ್ಮಿ ಶ್ರೀಮತಿ ಪ್ರಿಯಾ ಹರೀಶ್, ಉದ್ಯಮಿ ಶ್ರೀ ಸುರೇಶ್ ಕುಮಾರ್, ಸಂಗೀತ ಗುರು ಶ್ರೀಮತಿ ರಶ್ಮಿ ರವಿಕುಮಾರ್, ಯಕ್ಷವಾಸ್ಯಮ್ (ರಿ.) ಕಾರಿಂಜ ಇದರ ಸಂಚಾಲಕಿ ಸಾಯಿಸುಮಾ ನಾವಡ, ಯಕ್ಷ ಸ್ನೇಹ ಕಲಾಪ್ರತಿಷ್ಠಾನದ ಗೌರವಾಧ್ಯಕ್ಷ ಮಧುಸೂದನ ಅಲೆವೂರಾಯ, ಅಧ್ಯಕ್ಷೆ ಗೀತಾಲಕ್ಷ್ಮೀಶ ಸೇರಿದಂತೆ ಪ್ರತಿಷ್ಠಾನದ ಪದಾಧಿಕಾರಿಗಳು, ಸದಸ್ಯರು ಹಾಗೂ ನೂರಾರು ಕಲಾಭಿಮಾನಿಗಳು ಉಪಸ್ಥಿತರಿದ್ದರು.
ನಂತರ, ಯಕ್ಷವಾಸ್ಯಮ್ (ರಿ.) ಕಾರಿಂಜ ಇದರ ಮಹಿಳಾ ಕಲಾವಿದರಿಂದ ‘ಇಂದ್ರ ಕೀಲಕ’ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ ಅತ್ಯಂತ ಮನೋಜ್ಞವಾಗಿ ಪ್ರದರ್ಶಿಸಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

