ಪುತ್ತೂರಿನಲ್ಲಿ ಇಂದಿನಿಂದ 10 ದಿನಗಳ 'ಉಚಿತ ಸಂಸ್ಕೃತ ಕಲಿಕಾ ಶಿಬಿರ'

Upayuktha
0

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ 




ಪುತ್ತೂರು: ಸಂಸ್ಕೃತವು ಭಾರತದ ಪ್ರಾಚೀನ ಭಾಷೆ. ಸರಳ, ಸುಂದರ ಹಾಗೂ ಮಧುರವಾದ ಈ ಭಾಷೆಯನ್ನು ಕಲಿಯಲು ಒಂದು ಉತ್ತಮ ಅವಕಾಶವಾಗಿ ಇದೀಗ ಪುತ್ತೂರಿನಲ್ಲಿ ಶಿಬಿರವೊಂದನ್ನು ಆಯೋಜಿಸಲಾಗಿದೆ. ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ 'ಉಚಿತ ಸಂಸ್ಕೃತ ಸಂಭಾಷಣಾ ಶಿಬಿರ'ವು ಇದೇ ಎಪ್ರಿಲ್ 13 ರಿಂದ ಏಪ್ರಿಲ್ 22ರ ವರೆಗೆ 10 ದಿನಗಳ ಕಾಲ ನಡೆಯಲಿದೆ.


ಪುತ್ತೂರಿನ ಬೊಳುವಾರಿನಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದ 'ನವನೀತಂ ಸಭಾಂಗಣ'ದಲ್ಲಿ ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ಶಿಬಿರವನ್ನು ನಡೆಸಲಾಗುತ್ತದೆ. ಸಂಸ್ಕೃತ ಭಾರತೀಯಲ್ಲಿ ಸಕ್ರಿಯ ಸದಸ್ಯೆಯಾಗಿರುವ ಶ್ರೀಲತಾ ಕೆ.ಎಸ್ ಇಂದ್ರಪ್ರಸ್ಥ, ಮೈಸೂರು ಇವರು ಸಂಪನ್ಮೂಲ ವ್ಯಕ್ತಿಯಾಗಿ ಅಲ್ಲಿಂದ ಆಗಮಿಸಿ ಶಿಬಿರವನ್ನು ನಡೆಸಿಕೊಡಲಿರುವರು. 6 ವರ್ಷ ಮೇಲ್ಪಟ್ಟ ಎಲ್ಲರೂ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂಪರ್ಕಿಸಿ; 9591967066


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top