ಅಕ್ಷಯ ಕಾಲೇಜು ಪುತ್ತೂರು: “AVIATION FUTURE GROUND AND AIR” ಕಾರ್ಯಾಗಾರ

Upayuktha
0
ಏವಿಯೇಷನ್ ವಿಭಾಗದಿಂದ ಆಯೋಜನೆ




ಪುತ್ತೂರು: ಪುತ್ತೂರು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದ ಮೂಲಕ ಭವಿಷ್ಯ ನಿರ್ಮಾಣದಲ್ಲಿ ಮುಂಚೂಣಿಯಲ್ಲಿರುವ ಅಕ್ಷಯ ಕಾಲೇಜು, ಪುತ್ತೂರಿನಲ್ಲಿ ಏವಿಯೇಷನ್ ಶಿಕ್ಷಣವನ್ನು ಪರಿಚಯಿಸಿದ ಮೊದಲ ಕಾಲೇಜು ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ವಿದ್ಯಾರ್ಥಿಗಳಿಗೆ ಉದ್ಯೋಗಮುಖಿ ತರಬೇತಿ ನೀಡುವಲ್ಲಿ ಈ ಸಂಸ್ಥೆ ಪ್ರಮುಖ ಪಾತ್ರವಹಿಸುತ್ತಿದೆ.


ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಏವಿಯೇಷನ್ ವಿಭಾಗದ ವತಿಯಿಂದ “AVIATION FUTURE GROUND AND AIR” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರು ಬೇಸ್‌ನ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಸೀನಿಯರ್ ಏರ್-ಹೋಸ್ಟೆಸ್‌ಗಳಾದ ಶ್ರೀಮತಿ ದೀಪ ಹಾಗೂ ಶ್ರೀಮತಿ ಜಸ್ವಿಂದರ್ ಆಗಮಿಸಿ ವಿದ್ಯಾರ್ಥಿಗಳಿಗೆ ಏವಿಯೇಷನ್ ಕ್ಷೇತ್ರದ ವಿಮಾನ ನಿಲ್ದಾಣ ವ್ಯವಸ್ಥೆ ಹಾಗೂ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಯಾನದಲ್ಲಿ ಇರುವ ವಿವಿಧ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು.


ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಹ ಏವಿಯೇಷನ್ ಕ್ಷೇತ್ರದಲ್ಲಿ ತಮ್ಮ ಭವಿಷ್ಯವನ್ನು ಹೇಗೆ ರೂಪಿಸಿಕೊಳ್ಳಬಹುದು ಎಂಬುದರ ಬಗ್ಗೆ ಮಾರ್ಗದರ್ಶನ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಏವಿಯೇಷನ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ಜಯಶ್ರೀ ಉಪಸ್ಥಿತರಿದ್ದರು. ಜೊತೆಗೆ ಆಡಳಿತಾಧಿಕಾರಿ ಅರ್ಪಿತ್ ಟಿ.ಎ., HR ಭರತ್, PRO ಯಾಮಿನಿ ಹಾಗೂ ಉಪನ್ಯಾಸಕಿ ಆಶ್ರಿತಾ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.



إرسال تعليق

0 تعليقات
إرسال تعليق (0)
To Top