ಉಳ್ಳಾಲ, ಏಪ್ರಿಲ್ 7: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ರಿ), ಮಂಗಳೂರು ವಿಭಾಗ ಹಾಗೂ ನಿರ್ಮಲ ಭಾರತ್ ಚಾರಿಟಬಲ್ ಟ್ರಸ್ಟ್ (ರಿ), ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ “ಅಬ್ಬಕ್ಕ @500 ಪ್ರೇರಣಾದಾಯಿ ಉಪನ್ಯಾಸ ಸರಣಿ” ಕಾರ್ಯಕ್ರಮದ ಸಮಾರೋಪ ಸಮಾರಂಭವು ಏಪ್ರಿಲ್ 18ರಂದು ಉಳ್ಳಾಲದ ಶಾರದಾನಿಕೇತನ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವು ಸಂಜೆ 5 ಗಂಟೆಗೆ ದೀಪ ಪ್ರಜ್ವಲನೆಯೊಂದಿಗೆ ಆರಂಭವಾಗಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಅಲಕ್ಷ ವಂಶಸ್ಥರಾದ ಅನಿತಾ ಸುರೇಂದ್ರ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹ ಬೌದ್ಧಿಕ್ ಪ್ರಮುಖರಾದ ಸುಧೀರ್ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ.), ಉಚ್ಚಿಲ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮಹಾಮಸ್ತಕಾಭಿಷೇಕ ಸಮಿತಿ, ವೇಣೂರು ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ “ಅಬ್ಬಕ್ಕ @500” ಐನೂರರ ಸಂಭ್ರಮದ ಅಂಗವಾಗಿ ‘ಅಬ್ಬಕ್ಕ ನೆನಪಿನೈಸಿರಿ’ ಸಂಚಿಕೆಯ ಲೋಕಾರ್ಪಣೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ರಾ.ಸ್ವ.ಸೇ. ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಹ ಕಾರ್ಯವಾಹರಾದ ಪಿ. ಎಸ್. ಪ್ರಕಾಶ್, ಕೆ.ಆರ್.ಎಂ.ಎಸ್.ಎಸ್. ರಾಜ್ಯಾಧ್ಯಕ್ಷರಾದ ಡಾ. ಗುರುನಾಥ ಬಡಿಗೇರ್, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯಾಧ್ಯಕ್ಷರಾದ ಸಂದೀಪ್ ಬೂದಿಹಾಳ್ ಹಾಗೂ ನಿರ್ಮಲ ಭಾರತ್ ಚಾರಿಟಬಲ್ ಟ್ರಸ್ಟ್‌ನ ವಿಶ್ವಸ್ಥರಾದ ಕೆ. ರಮೇಶ್ ಅವರು ಉಪಸ್ಥಿತರಿರುವರು.
ಇದೇ ವೇಳೆ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸಂಸ್ಥಾಪಕರಾದ ಡಾ. ತುಕಾರಾಮ ಪೂಜಾರಿ ಹಾಗೂ ಡಾ. ಆಶಾಲತಾ ಸುವರ್ಣ ಅವರನ್ನು ವಿಶೇಷವಾಗಿ ಗೌರವಿಸಲಾಗುವುದು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವೀರ ರಾಣಿ ಅಬ್ಬಕ್ಕ ಪ್ರಶಸ್ತಿ ಪುರಸ್ಕೃತ ಗುರು ರಾಜಶ್ರೀ ಉಳ್ಳಾಲ್ ಅವರ ಮಾರ್ಗದರ್ಶನದಲ್ಲಿ ನಾಟ್ಯನಿಕೇತನ ಕೊಳ್ಳಿ ಶಿಷ್ಯವೃಂದದಿಂದ “ನೃತ್ಯಮೋಹನ” ಹಾಗೂ ‘ವೀರ ರಾಣಿ ಅಬ್ಬಕ್ಕ’ ಕಿರು ನೃತ್ಯ ರೂಪಕ ಪ್ರದರ್ಶನ ನಡೆಯಲಿದೆ.
ಕಾರ್ಯಕ್ರಮಕ್ಕೆ ಗಣ್ಯರು, ಶಿಕ್ಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

