ಹಾವೇರಿ ವಿಶ್ವವಿದ್ಯಾಲಯ ಪ್ರಥಮ ಘಟಕೋತ್ಸವದಲ್ಲಿ ಕನವಳ್ಳಿ ಯುವ ಪ್ರತಿಭೆಯ ಸಾಧನೆ

Upayuktha
0


ಹಾವೇರಿ‌: 2025–26ನೇ ಸಾಲಿನ ಹಾವೇರಿ ವಿಶ್ವವಿದ್ಯಾಲಯದ ಪ್ರಪ್ರಥಮ ಘಟಕೋತ್ಸವವು ದಿನಾಂಕ 06- ಏಪ್ರಿಲ್ 2026 ರಂದು ರಾಜ್ಯಪಾಲರ ಸಮ್ಮುಖದಲ್ಲಿ ಭವ್ಯವಾಗಿ ನಡೆಯಿತು. ಈ ಗೌರವಾನ್ವಿತ ಕಾರ್ಯಕ್ರಮದಲ್ಲಿ ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಕನವಳ್ಳಿ ಗ್ರಾಮದ ಶ್ರೀಮತಿ ರೇಖಾ ಮತ್ತು ಶ್ರೀಧರ ಬಳಿಗಾರ ರವರ ಸುಪುತ್ರ, ಯುವಪ್ರತಿಭೆ ಕುಮಾರ ಸಂತೋಷ ಬಳಿಗಾರ ಅವರು ಗಮನಾರ್ಹ ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಕೀರ್ತಿ ಪಡೆದಿದ್ದಾರೆ.


ಸ್ನಾತಕೋತ್ತರ ಪದವಿಯ ಆಂಗ್ಲ ಸಾಹಿತ್ಯದಲ್ಲಿ (ಎಂ ಎ). ಇಂಗ್ಲಿಷ್ ಮೂರನೇ ಸ್ಥಾನವನ್ನು ಪಡೆಯುವ ಮೂಲಕ ಅವರು ತಮ್ಮ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಈ ಸಾಧನೆಯ ಮೂಲಕ ಅವರು ತಮ್ಮ ತಂದೆ-ತಾಯಿ, ಗುರುಗಳು, ಸ್ನೇಹಿತರು ಹಾಗೂ ಸಂಬಂಧಿಕರಿಗೆ ಹೆಮ್ಮೆ ತಂದಿದ್ದು, ಹಾವೇರಿ ಜಿಲ್ಲೆಯ ಗೌರವವನ್ನು ಮತ್ತಷ್ಟು ಎತ್ತಿಹಿಡಿದಿದ್ದಾರೆ.


ಪ್ರಸ್ತುತ ಅವರು ಶಿಗ್ಗಾಂವದಲ್ಲಿರುವ ಎಸ್.ಆರ್.ಜೆ.ವಿ ಆರ್ಟ್ಸ್ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಂಗ್ಲ ಭಾಷಾ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸಾಧನೆಗೆ ರಂಭಾಪೂರಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ ಮಹಾವಿದ್ಯಾಲಯದ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು, ಬಳಿಗಾರ ಕುಟುಂಬದವರು, ಸಂಬಂಧಿಕರು ಮತ್ತು ಕನವಳ್ಳಿ ಗ್ರಾಮದ ಗುರುಹಿರಿಯರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. 


ಈ ಸಾಧನೆ ಮುಂದಿನ ಪೀಳಿಗೆಯ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ ಎಂದು ಶಿಕ್ಷಣ ವಲಯದವರು ಅಭಿಪ್ರಾಯಪಟ್ಟಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top