ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ಸಾಂಸ್ಕೃತಿಕ ಕಾರ್ಯಕ್ರಮ

Upayuktha
0



ಕಾಸರಗೋಡು: ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯುತ್ತಿದೆ. ಸಾವಿರಾರು ಭಕ್ತರು ಉತ್ಸವದಲ್ಲಿ ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿ ದೇವಿಯ ಅನುಗ್ರಹವನ್ನು ಪಡೆದರು.


ಜಾತ್ರೋತ್ಸವದ ಅಂಗವಾಗಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.), ಕಾಸರಗೋಡು ವತಿಯಿಂದ ಆಯೋಜಿಸಲಾದ ಸಾಂಸ್ಕೃತಿಕ ಕಲಾ ವೈಭವ ಕಾರ್ಯಕ್ರಮವು ನೂರಾರು ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗುರುರಾಜ್ ಕಾಸರಗೋಡು ಅವರ ಸಂಯೋಜನೆ ಮತ್ತು ನಿರೂಪಣೆಯಲ್ಲಿ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ ವರ್ಷಾ ಶೆಟ್ಟಿ, ದೀಕ್ಷಾ ಕುಲಾಲ್, ಹಂಶಿತ್ ಆಳ್ವ, ನವ್ಯಶ್ರೀ ಕುಲಾಲ್, ಆನ್ಮೇತಾ ಶೆಟ್ಟಿ, ತ್ರಿಷಾ ಅಡಕಲಕಟ್ಟೆ, ತನ್ಮಯಿ ಲಕ್ಷ್ಮಿ, ಪಲ್ಲವಿ ಪಿ. ಕುಲಾಲ್ ಸೇರಿದಂತೆ ಅನೇಕ ಕಲಾವಿದರು ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನ ನೀಡಿ ಪ್ರೇಕ್ಷಕರ ಮನಗೆದ್ದರು.


ಈ ಸಂದರ್ಭದಲ್ಲಿ ನಡೆದ ಸಮಾರಂಭದಲ್ಲಿ ದೇವಸ್ಥಾನದ ಆಡಳಿತ ಮುಕ್ತೇಸರ ಕೊಡಿಬೈಲು ನಾರಾಯಣ ಹೆಗ್ಡೆ, ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ರೈ, ಅಧ್ಯಕ್ಷ ಸುಧೀಚಂದ್ರ ಶೆಟ್ಟಿ, ಮುಕ್ತೇಸರ ಮಂಡಳಿ ಸದಸ್ಯರಾದ ಕೃಷ್ಣಕುಮಾರ್ ಐಲಾ ಹಾಗೂ ಪುರುಷೋತ್ತಮ ಐಲಾ, ಸಂಸ್ಥೆಯ ಗೌರವಾಧ್ಯಕ್ಷ ಗಣೇಶ್ ಪ್ರಸಾದ್ ಆಳ್ವ ಸೇರಿದಂತೆ ಹಲವರು ಉಪಸ್ಥಿತರಿದ್ದರು.



ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯ ಪ್ರತಿಭಾವಂತ ಕಲಾವಿದರಾದ ನವ್ಯಶ್ರೀ ಕೆ. ಕುಲಾಲ್, ಭುವಿ ಸಜೀಪ ಮತ್ತು ದೀಕ್ಷಾ ಆರ್. ಕುಲಾಲ್ ಅವರಿಗೆ “ಕಲಾ ಸೌರಭ 2026” ಪ್ರಶಸ್ತಿ ಪ್ರದಾನ ಮಾಡಲಾಯಿತು. ವರ್ಷಾ ಶೆಟ್ಟಿ ಅವರಿಗೆ ನೂರು ವೇದಿಕೆಗಳನ್ನು ಪೂರೈಸಿದ ಸಾಧನೆಗಾಗಿ “ಕಲಾ ಸಾರಥಿ 2026” ಗೌರವ ಸನ್ಮಾನ ನೀಡಿ ಗೌರವಿಸಲಾಯಿತು.


ಇದಲ್ಲದೆ, ಸಂಸ್ಥೆ ಸ್ಥಾಪನೆಯಾದಂದಿನಿಂದ ಎಲ್ಲಾ 50 ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಕಲಾವಿದರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಂತ್ಯದಲ್ಲಿ ಭಾಗವಹಿಸಿದ ಎಲ್ಲಾ ಕಲಾವಿದರಿಗೆ ಗೌರವ ಸ್ಮರಣಿಕೆಗಳನ್ನು ವಿತರಿಸಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top