ಅಕ್ಷಯ ಕಾಲೇಜು ಇಂಟೀರಿಯರ್ ಡಿಸೈನ್ ಅಂಡ್ ಡೆಕೋರೇಷನ್ ವಿಭಾಗದ ಭಿತ್ತಿ ಪತ್ರಿಕೆ ಉದ್ಘಾಟನೆ

Upayuktha
0

  


ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿರುವ ಅಕ್ಷಯ ಕಾಲೇಜಿನ ಇಂಟೀರಿಯರ್ ಡಿಸೈನ್ ಅಂಡ್ ಡೆಕೋರೇಷನ್ ವಿಭಾಗದ ಭಿತ್ತಿ ಪತ್ರಿಕೆ ಉದ್ಘಾಟನೆ ಎಲೈಟ್ ಅಸೋಸಿಯೇಷನ್ ಹಾಗೂ ಐಕ್ಯೂಎಸಿ ಅಸೋಸಿಯೇಷನ್ ವತಿಯಿಂದ ನಡೆಯಿತು.


ಕಾರ್ಯಕ್ರಮಕ್ಕೆ ಆಗಮಿಸಿ 'ಆಟಿಲಿಯರ್' ಭಿತ್ತಿ ಪತ್ರಿಕೆ ಉದ್ಘಾಟನೆ ಮಾಡಿದ ಆರ್ಕಿಟೆಕ್ಟ್ ರಾಮ್ ಪ್ರಕಾಶ್ ಒಳಾಂಗಣ ವಿನ್ಯಾಸವು ಕೇವಲ ತಾಂತ್ರಿಕ ಕೌಶಲ್ಯವಲ್ಲ, ಅದು ಬಹುಮುಖಿ ಕಲೆಯ ಮಿಶ್ರಣವೂ ಆಗಿದೆ, ಕಲೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.




ಕಾರ್ಯಕ್ರಮದ ಮುಖ್ಯ ಅತಿಥಿ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ ಇವರು ಹೀಗೆಯೇ ಅನೇಕ ಉತ್ತಮ ರೀತಿಯ ಲೇಖನಗಳು ಬರುತ್ತಿರಲಿ ಎಂದು ಹಾರೈಸಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಅರ್ಪಿತ್ ಟಿಎ, ಎಲೈಟ್ ಎಸೋಸಿಯೇಷನ್ ಸಂಯೋಜಕಿ ಹಾಗೂ ವಿದ್ಯಾರ್ಥಿ ಪದಾಧಿಕಾರಿಗಳು ಹಾಜರಿದ್ದರು. ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿಕೊಟ್ಟರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top