ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್

Upayuktha
0

 


ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ  ಕಾಲೇಜಿನ ವಿದ್ಯಾರ್ಥಿಗಳು ವರ್ಷದ  ವಿಶ್ವವಿದ್ಯಾನಿಲಯ ಮಟ್ಟದ ಅಂತಿಮ ಪರೀಕ್ಷೆಗಳಲ್ಲಿ ಗಮನಾರ್ಹ ಸಾಧನೆ ಮೆರೆದಿದ್ದು  ಪದವಿ ವಿಭಾಗದಲ್ಲಿ 3 ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ 9 ರ‍್ಯಾಂಕ್ಗಳೊಂದಿಗೆ ಒಟ್ಟು 12 ರ‍್ಯಾಂಕ್ಗಳಿಸಿದ್ದಾರೆ.  


ಜುಲೈ 2024ರಲ್ಲಿ ನಡೆದ ಪದವಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ರೋಡ್ರಿಗಸ್ ಪ್ರಣೀಲ್ ಮೆಲ್ವಿನ್ ಪ್ರಥಮ ರ‍್ಯಾಂಕ್ ಪಡೆದು ವಿಶ್ವವಿದ್ಯಾನಿಲಯ ಟಾಪರ್ ಆಗಿ ಹೊರಹೊಮ್ಮಿದ್ದು, ಪ್ರತಿಷ್ಠಿತ ಸೀತಾರಾಮ ಜಿಂದಾಲ್ ಗೋಲ್ಡ್ ಮೆಡಲ್ಗೆ ಭಾಜನರಾಗಿದ್ದಾರೆ. ಜೊತೆಗೆ ಅಕ್ಷತಾ ಪಿ. 7ನೇ ರ‍್ಯಾಂಕ್ ಮತ್ತು ದೀಕ್ಷಾ ಬಿ 10ನೇ ರ‍್ಯಾಂಕ್ಗಳಿಸಿರುತ್ತಾರೆ.


ಸ್ನಾತಕೋತ್ತರ ವಿಭಾಗದಲ್ಲಿ, ಎಂ.ಡಿ. ಇನ್ ಕ್ಲಿನಿಕಲ್ ನ್ಯಾಚುರೋಪಥಿಯಲ್ಲಿ ಡಾ. ಶಾಲಿನಿ ಪಿ.ವೈ ಪ್ರಥಮ ರ‍್ಯಾಂಕ್,  ಡಾ. ಗ್ರೀಷ್ಮಾ ವಿವೇಕ್ ಆಳ್ವ ದ್ವಿತೀಯ ರ‍್ಯಾಂಕ್ಹಾಗೂ ಡಾ. ಶ್ರದ್ಧಾ ಎಂ.ಕೆ 9ನೇ  ರ‍್ಯಾಂಕ್ ಗಳಿಸಿದ್ದಾರೆ.


ಎಂ.ಡಿ. ಇನ್ ಕ್ಲಿನಿಕಲ್ ಯೋಗ ವಿಭಾಗದಲ್ಲಿ ಡಾ. ವಿನಯ್ ಕುಮಾರ್ ಟಿ ದ್ವಿತೀಯ ರ‍್ಯಾಂಕ್, ಡಾ. ಭೂಮಿಕಾ ಬಿ.ಆರ್ 5ನೇ ರ‍್ಯಾಂಕ್, ಡಾ. ಹೋಬಿಜಾಮ್ ಕೇಕೆಸಾನಾ ದೇವಿ ಮತ್ತು ಡಾ. ಮಾರ್ಗರೆಟ್ ಸಲಾಂ ತಲಾ 6ನೇ ರ‍್ಯಾಂಕ್ ಗಳಿಸಿದ್ದು, ಡಾ. ಕಂಚನ್ ಮೈಬಾಮ್ 8ನೇ ರ‍್ಯಾಂಕ್ ಹಾಗೂ ಡಾ. ಕೃಷ್ಣೇಂದು ಪಿ ವಿನಯ್ 10ನೇ ರ‍್ಯಾಂಕ್ ಪಡೆದು ಕಾಲೇಜಿನ ಹೆಗ್ಗಳಿಕೆಯನ್ನು ಹೆಚ್ಚಿಸಿದ್ದಾರೆ.


ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ, ಟ್ರಸ್ಟಿ ವಿವೇಕ ಆಳ್ವ, ಪ್ರಾಂಶುಪಾಲರು ಹಾಗೂ ಬೋಧಕ ವೃಂದದವರು ಅಭಿನಂದಿಸಿದ್ದಾರೆ

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top