ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ಏಳನೇ ತರಗತಿಯ ವಿದ್ಯಾರ್ಥಿನಿ ಅನನ್ಯ ಬಿ. ಅವರು ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಸಂಶೋಧನೆಗಾಗಿ ಕೊಡಮಾಡುವ ‘ಇನ್ ಸ್ಪೈಯರ್ ಅವಾರ್ಡ್ ಮಾನಕ್’ 2025-26 ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅನನ್ಯಾ ಅವರು ರಚಿಸಿದ ‘ಸ್ಮಾಟ್ ಹೆಲ್ಮೆಟ್ ವಿದ್ ಕ್ರಾಶ್ ಸೆನ್ಸಾರ್’ ಎಂಬ ವಿಷಯದ ಬಗೆಗಿನ ವಿಜ್ಞಾನ ಮಾದರಿಗೆ ಈ ಪ್ರಶಸ್ತಿ ದೊರೆತಿದೆ. ಇವರಿಗೆ ಶಾಲೆಯ ವಿಜ್ಞಾನ ಶಿಕ್ಷಕಿ ರಮ್ಯಾಲಕ್ಷ್ಮಿ ಅವರು ಮಾರ್ಗದರ್ಶನವನ್ನು ನೀಡಿರುತ್ತಾರೆ. ಇವರು ಬಲ್ನಾಡು ನಿವಾಸಿಗಳಾದ ರಾಮಕೃಷ್ಣ ರಾವ್ ಹಾಗೂ ಬಿಂದು ಇ.ವಿ. ಅವರ ಪುತ್ರಿ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


