ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Upayuktha
0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.


     
ಕಾರ್ಯಕರ್ತೆಯರ ಮಾಸಿಕ ಗೌರವಧನ ರೂ.5500 ಹಾಗೂ ಸಹಾಯಕಿಯರ ಮಾಸಿಕ ಗೌರವಧನ ರೂ.3000 ಆಗಿರುತ್ತದೆ. ಅರ್ಜಿ ಸಲ್ಲಿಸಲು ಮೇ 16 ಕೊನೆಯ ದಿನ. ಸೂಕ್ತ ದಾಖಲೆಗಳೊಂದಿಗೆ ಅದೇ ಅಂಗನವಾಡಿ ಸರ್ವೆ ವ್ಯಾಪ್ತಿಯ 18 ರಿಂದ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

     
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕರ್ನಾಟಕ ರಾಜ್ಯದ ಪದವಿ ಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ 10 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರನ್ನು ಪರಿಗಣಿಸಲಾಗುತ್ತದೆ.  

     
ಸಹಾಯಕಿ ಹುದ್ದೆಗೆ ಕರ್ನಾಟಕ ರಾಜ್ಯದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ 10 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ 7 ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರನ್ನು ಪರಿಗಣಿಸಲಾಗುತ್ತದೆ. ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ.

     
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ  ಆಯಾ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಮಂಗಳೂರು ನಗರ: 0824-2959809, ಮಂಗಳೂರು ಗ್ರಾಮಾಂತರ :9620636888, 7760729919, ವಿಟ್ಲ: 08255-238080, ಬೆಳ್ತಂಗಡಿ: 08256-295134, ಸುಳ್ಯ: 08257-298139  ಯನ್ನು ಕಛೇರಿ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

إرسال تعليق

0 تعليقات
إرسال تعليق (0)
To Top