ವಿವೇಕಾನಂದ ಕಾಲೇಜಿನಲ್ಲಿ ಏ.27, 28 ರಂದು ಕಾಲೇಜು ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿ ಸಂಘದ ದಿನಾಚರಣೆ

Upayuktha
0

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯುತ್ತ) ಕಾಲೇಜಿನಲ್ಲಿ ಏಪ್ರಿಲ್ 27 ಮತ್ತು 28 ರಂದು ಕಾಲೇಜು ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿ ಸಂಘದ ದಿನಾಚರಣೆಯು ಕಾಲೇಜಿನ ಆವರಣದಲ್ಲಿ ನಡೆಯಲಿದೆ.

ಕಾಲೇಜು ವಾರ್ಷಿಕೋತ್ಸವದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರದ ವಿಧಾನಸಭಾ ಸದಸ್ಯ ಹರೀಶ್ ಪೂಂಜಾ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಗಣೇಶ್ ಸಂಜೀವ ವಹಿಸಲಿದ್ದಾರೆ. ಗೌರವ ಉಪಸ್ಥಿತಿಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಮತ್ತು ಸಂಚಾಲಕ ಮುರಳಿಕೃಷ್ಣ ಕೆ.ಎನ್ ವಹಿಸಲಿದ್ದಾರೆ.

ವಿದ್ಯಾರ್ಥಿ ಸಂಘದ ದಿನಾಚರಣೆಯ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ ಕೃಷ್ಣ ಭಟ್ ವಹಿಸಲಿದ್ದು, ಮುಖ್ಯ ಅಭ್ಯಾಗತರಾಗಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ದಾಮೋದರ ಕಣಜಾಲು ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರ ವೃಂದದವರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ವಿವಿಧ ದತ್ತಿನಿಧಿ ಬಹುಮಾನ ಪ್ರದಾನ ಕಾರ್ಯಕ್ರಮವೂ ನಡೆಯಲಿದೆ.

ಸಭಾ ಕಾರ್ಯಕ್ರಮದ ನಂತರದಲ್ಲಿ ಕಾಲೇಜಿನ ಯಕ್ಷರಂಜಿನಿಯ ವಿದ್ಯಾರ್ಥಿಗಳಿಂದ ಯಕ್ಷಗಾನ ಹಾಗೂ ಇನ್ನಿತರೆ ಸಾಂಸ್ಕೃತಿಕ  ಕಾರ್ಯಕ್ರಮಗಳು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಶ್ರೀ ಕೃಷ್ಣ ಗಣರಾಜ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

إرسال تعليق

0 تعليقات
إرسال تعليق (0)
To Top