ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ‘ಆಂತರ್ಯ2-2026’ ತಂತ್ರಜ್ಞಾನ ಮೇಳ ಯಶಸ್ವಿ

Upayuktha
0

  • ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಆರ್ಟ್ಸ್ ಸೈನ್ಸ್ ಎಂಡ್ ಕಾಮರ್ಸ್ ಸಮಗ್ರ ಪ್ರಶಸ್ತಿ, 
  • ಮಂಗಳೂರಿನ ಕೆನರಾ ಕಾಲೇಜು ರನ್ನರ್ ಅಪ್ 


ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಆಶ್ರಯದಲ್ಲಿ ರಾಷ್ಟ್ರ ಮಟ್ಟದ ತಂತ್ರಜ್ಞಾನ ಮೇಳ ಆಂತರ್ಯ2-2026 ವಿಜೃಂಭಣೆಯಿಂ ನಡೆಯಿತು.

 

ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಎಕ್ಸ್ ಫೇಕ್ಟರ್ ಸಾಫ್ಟ್ ವೇರ್ಸ್ ಪ್ರೈ. ಲಿ. ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ಮುಖ್ಯಸ್ಥ ಶರತ್ ಕುಮಾರ್. ಭಾಗವಹಿಸಿದ್ದು, ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ ಡಿ. ಕಲ್ಲಾಜೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕ ಸತ್ಯನಾರಾಯಣ ಭಟ್, ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ ಕೆ, ಎಂಸಿಎ ವಿಭಾಗದ ನಿರ್ದೇಶಕಿ ಡಾ.ಜೋತಿಮಣಿ ಕೆ, ಕಾರ್ಯಕ್ರಮ ಸಂಯೋಜಕಿ ಡಾ.ರಾಜೇಶ್ವರಿ ಎಂ, ವಿದ್ಯಾರ್ಥಿ ಸಂಯೋಜಕರಾದ ಆದಿತ್ಯ ಮತ್ತು ಹವ್ಯಾಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.




18 ಕಾಲೇಜುಗಳ 228 ವಿದ್ಯಾರ್ಥಿಗಳು ಪಾಲ್ಗೊಂಡು ಕೋಡಿಂಗ್, ವೆಬ್ ಡಿಸೈನ್, ಐಟಿ ಕ್ವಿಝ್, ಐಡಿಯಥಾನ್, ಐಟಿ ಮ್ಯಾನೇಜರ್, ಟ್ರೆಜರ್ ಹಂಟ್, ಗೇಮಿಂಗ್, ರೀಲ್ಸ್ ಮೇಕಿಂಗ್, ಡ್ಯಾನ್ಸ್ ಸ್ಪರ್ಧೆಗಳಲ್ಲಿ ಭಾಗವಿಹಿಸಿದ್ದರು.

 

ಸಮಾರೋಪ ಸಮಾರಂಭದಲ್ಲಿ ಇಂಜಿನಿಯರಿAಗ್ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ವಿದ್ಯಾ ಆರ್. ಗೌರಿ ಬಹುಮಾನ ವಿತರಣೆ ಮಾಡಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಆರ್ಟ್ಸ್ ಸೈನ್ಸ್ ಎಂಡ್ ಕಾಮರ್ಸ್ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಗೆದ್ದರೆ, ಮಂಗಳೂರಿನ ಕೆನರಾ ಕಾಲೇಜು ವಿದ್ಯಾರ್ಥಿಗಳು ರನ್ನರ್ ಅಪ್ ಪ್ರಶಸ್ತಿಯನ್ನು ಗಳಿಸಿದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top