ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ
ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ
ಕಾಲೇಜು ಕಮ್ಮಾಜೆ (ಮೂಲ್ಕಿ ತಾಲೂಕು) ಇಲ್ಲಿಗೆ 2026-27ನೇ ಸಾಲಿನ ಪ್ರಥಮ
ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ ಹಾಗೂ ಪಿ.ಸಿ.ಎಂ.ಸಿ
ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಎಸ್.ಎಸ್.ಎಲ್.ಸಿ ಅಂಕ ಮತ್ತು
ಸರ್ಕಾರದ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ.ಯಲ್ಲಿ ಪಾಸ್
ಆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಈ ವಿದ್ಯಾರ್ಥಿಗಳಿಗೆ ಯಾವುದೇ
ಶುಲ್ಕವಿಲ್ಲದೆ ಊಟ, ವಸತಿ, ಸಮವಸ್ತ್ರ,
ಪಠ್ಯಪುಸ್ತಕ, ಇನ್ನಿತರ ಸಾಮಗ್ರಿಗಳು ಮತ್ತು ಸಿಇಟಿ ಹಾಗೂ ನೀಟ್ ಪರೀಕ್ಷೆಗಳ
ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ.
ಅಭ್ಯರ್ಥಿಯು ತನ್ನ ಎಸ್.ಎ.ಟಿ.ಎಸ್ ಸಂಖ್ಯೆ,
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಹಾಗೂ ಸಂಬಂಧಿತ ಇತರೆ ದಾಖಲೆಗಳೊಂದಿಗೆ ಆನ್ಲೈನ್
ನಲ್ಲಿ ಅರ್ಜಿ ಸಲ್ಲಿಸಬಹುದು. ಅಥವಾ ನೇರವಾಗಿ ವಿದ್ಯಾರ್ಥಿಗಳು
ಅಥವಾ ಅವರ ಪಾಲಕರು ಪ್ರಥಮ
ಪಿಯುಸಿಗೆ ಎಪ್ರಿಲ್ 29 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಹತ್ತಿರದ ಯಾವುದೇ ವಸತಿ ಶಾಲಾ ಪ್ರಾಂಶುಪಾಲರನ್ನು
ಸಂಪರ್ಕಿಸಬಹುದು ಎಂದು ಕಮ್ಮಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು
ಪಿಯು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


