ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಹವ್ಯಕ ಮಂಡಲ,
ಮಂಗಳೂರು ಇವರ ಸಹಕಾರದೊಂದಿಗೆ ಏ.
21 ರಂದು ಬೆಳಿಗ್ಗೆ 10.30ಕ್ಕೆ ಶ್ರೀ ಶಂಕರಾಚಾರ್ಯ
ಜಯಂತಿಯನ್ನು ನಂತೂರು ಶ್ರೀ ಭಾರತೀ ಸಮೂಹ
ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ಆಯೋಜಿಸಲಾಗಿದೆ.
ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್
ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಿ.ವೇದವ್ಯಾಸ
ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸಾಹಿತಿ ಅನಂತಸುಬ್ರಹ್ಮಣ್ಯ ಶರ್ಮ ಅವರು ಜಯಂತಿ
ಸಂದೇಶವನ್ನು ನೀಡಲಿದ್ದಾರೆ ಎಂದು ಕನ್ನಡ ಮತ್ತು
ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


