ಬೆಂಗಳೂರು: ಸಂಗೀತ ನೃತ್ಯ ಕಲಾವಿದರ ಸಂಘದ ಅಧ್ಯಕ್ಷ ಶ್ರೀ ಸಾಯಿನಾರಾಯಣ ಕಲ್ಮಡ್ಕ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಕೆಂಗೇರಿ ಶ್ರೀ ಗುರುರಾಜ ಭವನದಲ್ಲಿ ಇತ್ತೀಚೆಗೆ ನಡೆಯಿತು. ಉಪಾಧ್ಯಕ್ಷೆ ಶಾಲಿನಿ ಶ್ರೀಕಾಂತ್ ಅವರು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ವಿದ್ವಾನ್ ಸಂಜೀವ್ ಕುಮಾರ್ ಅವರಿಂದ ಹಾಗೂ ದೇಶದ ನಾನಾ ಸಂಚಾಲಕರುಗಳಿಂದ ವರದಿವಾಚನ ನಡೆಯಿತು.
ಹಿರಿಯ ವೀಣಾ ಕಲಾವಿದೆ ವಿದುಷಿ ಉಷಾ ರಾಮಮೂರ್ತಿ ಅವರನ್ನು ಅಖಿಲ ಭಾರತೀಯ ಸಂಗೀತ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಂಗೀತ ನೃತ್ಯ ಕಲಾವಿದರ ಏಳಿಗೆಗಾಗಿ ಒಗ್ಗಟ್ಟಿನಿಂದ ಶ್ರಮಿಸುವುದೆಂದು ಮಹಾಸಭೆಯಲ್ಲಿ ತೀರ್ಮಾನಿಸಲಾಯಿತು.
ಒಕ್ಕೂಟದಿಂದ ನಡೆಯುವ ಆನ್ಲೈನ್ ಸಂಗೀತ ನೃತ್ಯ ಸ್ಪರ್ಧಾ ವಿಜೇತರುಗಳಿಗೆ ಬಹುಮಾನ ವಿತರಿಸಲಾಯಿತು.
ಸಂಘದ ಮೂಲಕ ಅಯೋಧ್ಯೆ ಕಾಶೀ ದೇವಾಲಯಗಳಲ್ಲಿ ನಡೆಯುತ್ತಿರುವ ಸಾಪ್ತಾಹಿಕ ಸರಣಿ ಕಾರ್ಯಕ್ರಮಗಳನ್ನು ನೀಡಿದ ಕಲಾವಿದರನ್ನು ಅಭಿನಂದಿಸಲಾಯಿತು.
ಅಧ್ಯಕ್ಷರ ಅನುಮತಿ ಮೇರೆಗೆ ಇತರ ವಿಚಾರಗಳಲ್ಲಿ ಕಲಾವಿದರುಗಳಿಗೆ ಆಗುತ್ತಿರುವ ವಿವಿಧ ಸಮಸ್ಯೆಗಳನ್ನು ಒಕ್ಕೂಟದ ಮೂಲಕ ಎದುರಿಸುವ ಕುರಿತು ಕೂಲಂಕುಷವಾಗಿ ಚರ್ಚಿಸಲಾಯಿತು.
ಸಂಘದ ಮೂಲಕ ವಿಶ್ವಸಂಗೀತ ನೃತ್ಯ ಸಮ್ಮೇಳನವನ್ನು ನಡೆಸುವುದರ ಮೂಲಕ ಜಗತ್ತಿಗೆ ಭಾರತೀಯ ಕಲೆಗಳ ವಿರಾಟ್ ಪ್ರದರ್ಶನವನ್ನು ಹಾಗೂ ಒಗ್ಗಟ್ಟನ್ನು ಪ್ರದರ್ಶಿಸುವುದು ಎಂದು ಸರ್ವಾನುಮತದಿಂದ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ
ಮೈಸೂರು ವಿಭಾಗದ ನೂತನ ಅಧ್ಯಕ್ಷರಾದ ಡಾ. ಚಿತ್ರ ಬಿಳಿಗಿರಿ ಅವರನ್ನು ಅಭಿನಂದಿಸಲಾಯಿತು. ಹಾಗೂ ನೂತನ ಪದಾಧಿಕಾರಿಗಳ ಪರಿಚಯ ನೀಡಲಾಯಿತು. ಸಂಘದ ಅಧ್ಯಕ್ಷ ಸಾಯಿನಾರಾಯಣ ಕಲ್ಮಡ್ಕ ಮಾತನಾಡಿ ಕಲೆ ಕಲಾವಿದರ ಹಕ್ಕು ಇವುಗಳ ಉಳಿವಿಗಾಗಿ ಬೆಳವಣಿಗೆಗಾಗಿ ಸರ್ವರ ಸಹಕಾರವನ್ನೂ ಯಾಚಿಸಿದರು.
ಹಾಗೂ ಬೆಟ್ಟ ವೆಂಕಟೇಶ್ ಅವರ ವಂದಾನರ್ಪಣೆಯೊಂದಿಗೆ ಮಹಾಸಭೆ ಮುಕ್ತಾಯಗೊಂಡಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


