ಯಲಿಹಡಲಗಿ–ಅಡಹಳಟ್ಟಿ ರಸ್ತೆ ದುಸ್ಥಿತಿ: ಗ್ರಾಮಸ್ಥರ ಆಕ್ರೋಶ, ತಕ್ಷಣದ ದುರಸ್ತಿಗೆ ಬೇಡಿಕೆ

Upayuktha
0



ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಲಿಹಡಲಗಿ ಗ್ರಾಮದಿಂದ ಅಡಹಳಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟು, ಹೊಂಡ–ಗುಂಡಿಗಳಿಂದ ತುಂಬಿಕೊಂಡಿದೆ. ರಸ್ತೆ ದುರಸ್ತಿಗೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ ತೋರಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.


ಸ್ಥಳೀಯರು ಹೇಳುವಂತೆ, ಈ ರಸ್ತೆಯಲ್ಲಿ ದಿನನಿತ್ಯ ಸಂಚರಿಸುವ ವಾಹನಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಬೈಕ್ ಸವಾರರು ಜೀವಭಯದಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಬಹುತೇಕ ದಿನಗಳಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಅಡಹಳಟ್ಟಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಭೀಮು ಕೇರಿ ಅವರು ಸೇರಿದಂತೆ ಗ್ರಾಮಸ್ಥರು ವಿಡಿಯೋ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. “ಒಂದು ದಿನ ಬಿಡಿಸಿ ಒಂದು ಅಪಘಾತ ಆಗುತ್ತಿದೆ. ಬಸ್ ಚಾಲಕರು ಸಹ ರಸ್ತೆ ಪಕ್ಕದ ಕಂಟಿಗಳು ತೆಗೆದುಹಾಕಬೇಕು ಎಂದು ಹೇಳುತ್ತಿದ್ದಾರೆ. ದಯವಿಟ್ಟು ಶೀಘ್ರದಲ್ಲಿ ರಸ್ತೆ ದುರಸ್ತಿ ಮಾಡಿ,” ಎಂದು ಅವರು ಮನವಿ ಮಾಡಿದ್ದಾರೆ.


ಗ್ರಾಮಸ್ಥರ ಪ್ರಕಾರ, ಹಲವು ಬಾರಿ ಮಾಧ್ಯಮಗಳ ಮೂಲಕ ಮತ್ತು ಮನವಿಗಳ ಮೂಲಕ ಸಮಸ್ಯೆ ಗಮನಕ್ಕೆ ತಂದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. “ಚುನಾವಣೆ ಸಮಯದಲ್ಲಿ ಅಭಿವೃದ್ಧಿಯ ಭರವಸೆ ನೀಡುವ ರಾಜಕಾರಣಿಗಳು, ನಂತರ ಜನರ ಸಮಸ್ಯೆಗಳನ್ನು ಮರೆತುಬಿಡುತ್ತಾರೆ,” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಅಥಣಿ ತಾಲೂಕಿನ ಅನೇಕ ಗ್ರಾಮಗಳಲ್ಲಿ ಇದೇ ರೀತಿಯ ರಸ್ತೆಗಳ ದುಸ್ಥಿತಿ ಮುಂದುವರಿದಿದ್ದು, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಆಡಳಿತದಿಂದ ಸಮರ್ಪಕ ಕ್ರಮ ಕೈಗೊಳ್ಳದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.


ತಕ್ಷಣ ರಸ್ತೆ ದುರಸ್ತಿ ಕಾರ್ಯ ಕೈಗೊಂಡು, ಸಂಚಾರಕ್ಕೆ ಸುರಕ್ಷಿತ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಈಗಾದರೂ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳುವರೇ ಎಂಬುದು ಕಾದು ನೋಡಬೇಕಿದೆ.


ವರದಿ: ಮಹೇಶ್ ಶರ್ಮಾ



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top