ಬೆಳ್ತಂಗಡಿ : ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ

Upayuktha
0

ಮಂಗಳೂರು: ಆಗಸ್ಟ್ 2026ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು  ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಬೆಳ್ತಂಗಡಿ ತಾಲೂಕಿನ ಮಾಲಾಡಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಇಲ್ಲಿ ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಂದ  ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಪ್ರಿಲ್ 27 ರಿಂದ ಮೇ 8 ರವರೆಗೆ ಇಲಾಖಾ ವೆಬ್‍ಸೈಟ್ ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಾಲಾಡಿ ಬೆಳ್ತಂಗಡಿ ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 8 ಕೊನೆಯ ದಿನ. ಮಹಿಳಾ ಅಭ್ಯರ್ಥಿಗಳಿಗೆ ಉಚಿತ ಪ್ರವೇಶ  ಕಲ್ಪಿಸಲಾಗಿದೆ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಡಿ ಬರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನೀಡುವ ತರಬೇತಿಯಿಂದ ವಿದ್ಯಾರ್ಥಿಗಳ ಕೌಶಲ್ಯತೆ ಅಭಿವೃದ್ದಿ ಹೊಂದಿ ಉದ್ಯಮಗಳಲ್ಲಿ ಹೆಚ್ಚಿನ ಉದ್ಯೋಗವಕಾಶಗಳು ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗಕ್ಕೆ ಸದಾವಕಾಶಗಳು ಇದ್ದು ಹಾಗೂ ಹೆಚ್ಚಿನ ವೇತನವನ್ನು ಪಡೆಯಲು ಅರ್ಹತೆ ಹೊಂದಿರುತ್ತಾರೆ. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ಹೊಂದಿ ಸ್ವಯಂ ಉದ್ಯೋಗ ಮಾಡಲು ಅವಕಾಶವಿರುತ್ತದೆ. ಮತ್ತು ಸಂಸ್ಥೆಯಲ್ಲಿ ತರಬೇತಿ ಹೊಂದಿರುವ ತರಬೇತಿದಾರರಿಗೆ ಕೇಂದ್ರ ಸರ್ಕಾರದಿಂದ ಎನ್.ಟಿ.ಸಿ ದೃಢೀಕರಣ ಪತ್ರವನ್ನು ನೀಡಲಾಗುವುದು ಇದರಿಂದ ಎಲ್ಲಾ ದೇಶಗಳಲ್ಲಿ ಉದ್ಯೋಗ ಪಡೆಯಲು ಅವಕಾಶವಿರುತ್ತದೆ.

ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಪ್ರಾಚಾರ್ಯರ ದೂರವಾಣಿ ಸಂಖ್ಯೆ: 6361060652, 9611375614 ಅಥವಾ  08256-200606 ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top