ಭಗೀರಥರ ತಪಸ್ಸು ಪರಿಶ್ರಮ ಬದುಕಿಗೆ ಮಾದರಿ : ಎಂ ಎ ಗಫೂರ್

Upayuktha
0

 


ಉಡುಪಿ: ರಾಜನಾಗಿ, ಋಷಿಯಾಗಿ ಭಗೀರಥರು ಸಮಾಜಕ್ಕೆ ಒಂದು ದೊಡ್ಡ ಸಂದೇಶವನ್ನು ನೀಡಿದ್ದಾರೆ. ಅವರು ತಮ್ಮ ಪ್ರಯತ್ನ ಹಾಗೂ ಪರಿಶ್ರಮದ ಮೂಲಕ ಗಂಗೆಯನ್ನೇ ಧರೆಗೆ ತಂದವರು. ಭಗೀರಥರ ತಪಸ್ಸು ಹಾಗೂ ಪರಿಶ್ರಮದ ಮನೋಭಾವವನ್ನು ನಮ್ಮ ದುಡಿಮೆ ಮತ್ತು ದಿನನಿತ್ಯದ ಬದುಕಿನಲ್ಲಿ ಆಳವಡಿಸಿಕೊಳ್ಳಬೇಕು ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ. ಗಫೂರ್ ಹೇಳಿದರು.

 

ಅವರು ಇತ್ತೀಚೆಗೆ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶ್ರೀ ಭಗೀರಥರ ಭಾವಚಿತ್ರಕ್ಕೆ ಪುಷ್ಫಾರ್ಚನೆ ಸಲ್ಲಿಸಿ ಮಾತನಾಡಿದರು. 

 

ಸಮಾಜದಲ್ಲಿರುವ ಅಸಮಾನತೆ, ಅಸ್ಪಶ್ಯತೆ ಹಾಗೂ ಮೌಢ್ಯಗಳನ್ನು ಹೋಗಲಾಡಿಸಲು ಶ್ರಮಿಸಿ ಸಮಾಜಕ್ಕೆ ಕೊಡುಗೆ ನೀಡಿದ ದಾರ್ಶನಿಕರ ಕುರಿತು ಯುವ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಸರಕಾರವು ಜಯಂತಿ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬಂದಿದ್ದು, ಯುವ ಪೀಳಿಗೆಯು ಮಹನೀಯರ ತತ್ವ ಆದರ್ಶಗಳನ್ನು ತಮ್ಮ ಜೀವನದಲ್ಲಿ ಆಳವಡಿಸಿಕೊಂಡಾಗ ಜಯಂತಿ ಕಾರ್ಯಕ್ರಮಗಳು ಅರ್ಥಪೂರ್ಣಗೊಳ್ಳುತ್ತದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನೀರಿನಿಂದ ಉಪ್ಪು ತಯಾರಿಸಿದವರು ಉಪ್ಪಾರ ಜನಾಂಗದವರಾದರು. ಹಾಗಾಗಿ ಉಪ್ಪಾರ ಜನಾಂಗಕ್ಕೂ ಭಗೀರಥ ಮಹರ್ಷಿಗೂ ಸಂಬಂಧ ಇದೆ. ಕೆಲಸದಲ್ಲಿ ಬದ್ಧತೆ ಮುಖ್ಯ ಯಾವುದೇ ಕೆಲಸದ ಬಗ್ಗೆ ಬದ್ಧತೆ ಇದ್ದಲ್ಲಿ ಮಾತ್ರವೇ ಯಶಸ್ವಿಗೊಳಿಸಲು ಸಾಧ್ಯ ಎಂದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡಬೇಕು ಎಂದರು.

 

ಕಾರ್ಯಕ್ರಮದಲ್ಲಿ ಉಪತಹಶೀಲ್ದಾರ್ ನವನೀತ್, ಜಿಲ್ಲಾಡಳಿತ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ವರ್ಷಾ ನಿರೂಪಿಸಿ, ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ  ಕನ್ನಡ ಉಪನ್ಯಾಸಕ ರಾಮಾಂಜಿ ವಂದಿಸಿದರು.

 

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

 


Post a Comment

0 Comments
Post a Comment (0)
To Top