ಏ.12: ಭರತಾಂಜಲಿ ಕಿಂಕಿಣಿ ತ್ರಿಂಶತ್ ಸಮಾರೋಪ

Upayuktha
0



ಮಂಗಳೂರು: ಭರತಾಂಜಲಿ (ರಿ) ಕೊಟ್ಟಾರ, ಮಂಗಳೂರು ನೃತ್ಯ ಸಂಸ್ಥೆಯ 30 ರ ಸಂಭ್ರಮ ಕಿಂಕಿಣಿ ತ್ರಿoಶತ್ ಸಮಾರೋಪ ಸಂಭ್ರಮ ಕಾರ್ಯಕ್ರಮವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಭಾನುವಾರ ದಿನಾಂಕ 12 ರಂದು ಮಂಗಳೂರಿನ ಪುರಭವನದಲ್ಲಿ ಸಂಜೆ 4:30 ರಿಂದ ಆಯೋಜಿಸಲಾಗಿದೆ.


ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಆಶೀರ್ವಚನ ಮಾಡಲಿರುವರು. ನಟರಾಜ ದೀಪ ಪ್ರಜ್ವಲನವನ್ನು ಗುರುಗಳಾದ ಉಳ್ಳಾಲ ಮೋಹನ್ ಕುಮಾರ್ ಮಾಡಲಿದ್ದು, ಮುಖ್ಯ ಅಭ್ಯಾಗತರಾಗಿ ಕ್ಯಾಂಪ್ಕೋ ಸಂಸ್ಥೆಯ ಡಾ. ಸತ್ಯನಾರಾಯಣ ಬಿ ವಿ, ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮ ಇಲ್ಲಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಕಾರಂತ್ ನರಿಕೊಂಬು, ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರಾದ ಸುಬ್ರಮಣ್ಯ ಪ್ರಸಾದ್ ಕೊರ್ಯಾರ್ ಭಾಗವಹಿಸಲಿರುವರು.


ಸಾಂಸ್ಕೃತಿಕ ಕಾರ್ಯಕ್ರಮವಾಗಿ ಬೆಂಗಳೂರಿನ ಪ್ರಸಿದ್ಧ ಕಲಾವಿದೆ ವಿದುಷಿ ಗೌರಿ ಸಾಗರ್ ಇವರಿಂದ ಹಾಸ್ಯಾಧಾರಿತ ಭರತನಾಟ್ಯ ಪ್ರದರ್ಶನ ವಿನೋದ ಹಾಗೂ ಸಂಸ್ಥೆಯ ಹೊರ ಜಿಲ್ಲೆಗಳ ಹಿರಿಯ ವಿದ್ಯಾರ್ಥಿನಿಯರಿಂದ ಶ್ರೀ ರಾಮಾಯಣಂ ಪ್ರಸ್ತುತಿಗಳು ಜರುಗಲಿವೆ ಎಂದು ಸಂಸ್ಥೆಯ ನಿರ್ದೇಶಕಿ ವಿದುಷಿ ಪ್ರತಿಮಾ ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top